Sunday 13 June 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಭೀಮ್ ಸುದ್ದಿ

ಫೆ 24ರಂದು ಮಲೈಮಹದೇಶ್ವರ ಬೆಟ್ಟದಲ್ಲಿ ಜನಪರ ಉತ್ಸವ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಲೈಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜನಪರ ಉತ್ಸವ ಕಾರ್ಯಕ್ರಮವನ್ನು ಫೆ. 24ರಂದು ಮಧ್ಯಾಹ್ನ 3 ಗಂಟೆಗೆ ಮಲೈಮಹದೇಶ್ವರ ಬೆಟ್ಟದ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ

2020-02-22 05:30:00,

Ajeya Imageಬೆಂಗಳೂರು, ಫೆ.22

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಲೈಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜನಪರ ಉತ್ಸವ ಕಾರ್ಯಕ್ರಮವನ್ನು ಫೆ. 24ರಂದು ಮಧ್ಯಾಹ್ನ 3 ಗಂಟೆಗೆ ಮಲೈಮಹದೇಶ್ವರ ಬೆಟ್ಟದ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕರಾದ ಆರ್. ನರೇಂದ್ರ ಅಧ್ಯಕ್ಷತೆ ವಹಿಸುವರು. ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠಾಧ್ಯಕ್ಷರಾದ ಪ್ರಣವ ಪಟ್ಟದ ಗುರುಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಲೋಕಸಭಾ ಸದಸ್ಯ ವಿ. ಶ್ರೀನಿವಾಸ ಪ್ರಸಾದ್, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಕೆ. ಎಸ್. ಮಹೇಶ್, ಕೊಳ್ಳೇಗಾಲ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ರಾಜೇಂದ್ರ, ಉಪಾಧ್ಯಕ್ಷöರಾದ ಲತಾ ರಾಜಣ್ಣ, ಜಿಲ್ಲಾ ಪಂಚಾಯತ್ ಸದಸ್ಯರಾದ ಇಶ್ರತ್ ಬಾನು, ತಾಲ್ಲೂಕು ಪಂಚಾಯತ್ ಸದಸ್ಯರಾದ ಹಲಗತಂಬಡಿ, ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರುಕ್ಮಿಣಿ ಹಾಗೂ ಉಪಾಧ್ಯಕ್ಷರಾದ ಬಿ.ಮಹೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಜಿಲ್ಲಾಧಿಕಾರಿಗಳಾದ ಡಾ.ಎಂ.ಆರ್.ರವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿಗಳಾದ ಎಚ್.ಡಿ. ಆನಂದ್ ಕುಮಾರ್ ಹಾಗೂ ಮಲೈಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಜಯವಿಭವಸ್ವಾಮಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಪದಗಂಟು :   
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©