ಶುಕ್ರವಾರ 03 ಜುಲೈ 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ದೇಶದ್ರೋಹ ಪ್ರಕರಣ: ನಾಳೆ ಮಹತ್ವದ ಸಭೆ

ದೇಶ ವಿರೋಧಿ ಚಟುವಟಿಕೆ ನಡೆಸಲು ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಯುತ್ತಿದೆ.

2020-02-22 05:30:00,

ದಾವಣಗೆರೆ, ಫೆ.22

ದೇಶ ವಿರೋಧಿ ಚಟುವಟಿಕೆ ನಡೆಸಲು ಅಂತಾರAjeya Imageಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಯುತ್ತಿದೆ. ಇದರ ಹಿಂದೆ ಹಲವು ಸಂಘಟನೆಗಳು, ಹಲವು ಜನರು ಇದ್ದಾರೆ. ಈ ಬಗ್ಗೆ ನಾಳೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ನಾಳೆ ನಡೆಯುವ ಸಭೆಯಲ್ಲಿ ಈ ಷಡ್ಯಂತ್ರದ ಬಗ್ಗೆ ತನಿಖೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ದೇಶದ್ರೋಹಿಗಳಿಗೆ ಬೆಂಬಲ ನೀಡುವವರ ಬಗ್ಗೆಯೂ ತನಿಖೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಕಾಲೇಜು ವಿದ್ಯಾರ್ಥಿಗಳನ್ನು ದುರುಪಯೋಗ ಪಡಿಸಿಕೊಂಡು, ದೇಶವಿರೋಧಿ ಚಟುವಟಿಕೆಯಲ್ಲಿ ತೊಡಗಿಸುವ ಪ್ರಯತ್ನ ನಡೆದಿದೆ. ಈ ಬಗ್ಗೆ ಕಠಿಣ ಕ್ರಮ ಜರುಗಿಸಲಾಗುವುದು. ಶಿಕ್ಷಣ ಸಂಸ್ಥೆಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಇಂತಹ ದೇಶ ವಿರೋಧಿ ಚಟುವಟಿಕೆ ಕಂಡುಬಂದರೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದರು.

ಕಲಬುರಗಿಯಲ್ಲಿ ಎಐಎಂಐಎಂ ನಾಯಕ ವಾರಿಸ್ ಪಠಾಣ್ ವಿರುದ್ಧ ದೂರು ದಾಖಲಿಸಲು ವಿಳಂಬದ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಈಗಾಗಲೇ ಕಲಬುರಗಿ ಪೊಲೀಸ್ ಆಯುಕ್ತರ ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಪಠಾಣ್ ವಿರುದ್ಧವೂ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಶಾಸಕರ ಭವನಕ್ಕೆ ಮಾಧ್ಯಮ ನಿರ್ಬಂಧ ವಿಚಾರದ ಬಗ್ಗೆ ಹೇಳಿದ ಅವರು, ಅದು ಸ್ಪೀಕರ್ ವ್ಯಾಪ್ತಿಯಲ್ಲಿದೆ. ಈ ಬಗ್ಗೆ ತಾವು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನುಣುಚಿಕೊಂಡರು.


ಪದಗಂಟು :  
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©