ಬೆಂಗಳೂರು,ಫೆ.22
ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ `ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಪ್ರಗತಿ ಸಾಧಿಸಿದ ಜಿಲ್ಲೆಯ ಪಂಚಾಯತಿ ಅಭಿವೃದ್ಧಿ ಅಕಾರಿಗಳನ್ನು ಹಾಗೂ ಜಿಲ್ಲಾ ಪಂಚಾಯತಿ ಕಚೇರಿ ಸಿಬ್ಬಂದಿಗಳನ್ನು ಮುಖ್ಯ ಕಾರ್ಯನಿರ್ವಹಣಾಕಾರಿ ಎನ್.ಎಂ.ನಾಗರಾಜ ಅವರು ಗ್ರಾಮೀಣಾಭಿವೃದ್ಧಿಯಲ್ಲಿ ಸಾಧಕರು ಎಂಬ ಪ್ರಶಸ್ತಿ ಫಲಕ ನೀಡಿ ಅಭಿನಂದಿಸಿದರು.
ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಮುಖ್ಯ ಯೋಜನಾಕಾರಿ ವಿನುತಾರಾಣಿ, ಮುಖ್ಯ ಲೆಕ್ಕಾಕಾರಿ ಟಿ.ಆರ್. ಶೋಭ,, ತಾಲ್ಲೂಕು ಕಾರ್ಯ ನಿರ್ವಹಣಾಕಾರಿಗಳು ಉಪಸ್ಥಿತರಿದ್ದರು.
Designed, Developed and Maintained by PRABHAT SERVICES ™  , AJEYA KANNADA DAILY 2019 ©