ಶುಕ್ರವಾರ 03 ಜುಲೈ 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಸುಮಾರ್ ಸುದ್ದಿ

ವಿಶೇಷ ಸಂಗೀತ/ನೃತ್ಯ ಮತ್ತು ತಾಳವಾದ್ಯ ಪರೀಕ್ಷೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2020ನೇ ಮೇ-ಮಾಹೆಯಲ್ಲಿ ನಡೆಸಲಿರುವ ವಿಶೇಷ ಸಂಗೀತ/ನೃತ್ಯ ಮತ್ತು ತಾಳವಾದ್ಯ ಪರೀಕ್ಷೆಗಳಿಗೆ ಅಭ್ಯರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ

ಸುಮಾರ್ ಸುದ್ದಿ

2020-02-22 05:30:00,

ಬೆಂಗಳೂರು, ಫೆ.22: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2020ನೇ ಮೇ-ಮಾಹೆಯಲ್ಲಿ ನಡೆಸಲಿರುವ ವಿಶೇಷ ಸಂಗೀತ/ನೃತ್ಯ ಮತ್ತು ತಾಳವಾದ್ಯ ಪರೀಕ್ಷೆಗಳಿಗೆ ಅಭ್ಯರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಗಳಿಗೆ ಇಲಾಖೆಯ ವೆಬ್‌ಸೈಟ್ ಮುಖಾಂತರ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸ್ವೀಕರಿಸಲು ದಿನಾಂಕ: 24.02.2020 ರಿಂದ 26.03.2020ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸದರಿ ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್‌ನ ಇತರೆ ಪರೀಕ್ಷಾ ವಿಭಾಗದಲ್ಲಿ ಪಡೆಯಬಹುದಾಗಿದೆ ಮತ್ತು ಮಂಡಳಿಯ ದೂರವಾಣಿ ಸಂಖ್ಯೆ: 080-23360108/109ಗೆ ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ.




ಪದಗಂಟು :   
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©