Wednesday 28 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಸುಮಾರ್ ಸುದ್ದಿ

ಆ.9ರಂದು ಕ್ವಿಟ್ ಇಂಡಿಯಾ ಸ್ಮರಣೆ

2020-08-08 05:30:00, ajeyanews.com

Ajeya Imageಶಿವಮೊಗ್ಗ,ಆ.8: ನಾಳೆ ಬೆಳಿಗ್ಗೆ 11.30ಕ್ಕೆ ಕಾಂಗ್ರೆಸ್ ಭವನದಲ್ಲಿ ಕ್ವಿಟ್ ಇಂಡಿಯಾ ಚಳವಳಿ ಕಾರ್ಯಕ್ರಮ ನಡೆಯಲಿದೆ. 
ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳವಳಿ ಒಂದು ಅಸಹಕಾರ ಚಳವಳಿಯಾಗಿದ್ದು, ಆ.9ರ 1947ರಂದು ಗಾಂಧೀಜಿಯವರ ಮುಂದಾಳತ್ವದಲ್ಲಿ ಮಾಡು ಇಲ್ಲವೆ ಮಡಿ, ಸ್ವರಾಜ್ಯ ನಮ್ಮ ಜನ್ಮ ಸಿದ್ದ ಹಕ್ಕು ಅದನ್ನು ಪಡೆದೇ ತೀರುತ್ತೇವೆ ಎಂಬ ಘೋಷಣೆಯೊಂದಿಗೆ ಕ್ವಿಟ್ ಇಂಡಿಯಾ ಚಳವಳಿ ಆರಂಭವಾಗಿದೆ. ಈ ಚಳವಳಿ ಐತಿಹಾಸಿಕವಾಗಿದೆ ಎಂದು ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ವೈ.ಹೆಚ್. ನಾಗರಾಜ್ ತಿಳಿಸಿದ್ದಾರೆ. 
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪಕ್ಷದ ಪ್ರಮುಖರು, ಕಾರ್ಯಕರ್ತರು ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಪ್ರಧಾನ ಕಾರ್ಯದರ್ಶಿ ಸಿ.ಹೆಚ್. ಚಂದ್ರಭೂಪಾಲ್ ಕೋರಿದ್ದಾರೆ.

ಪದಗಂಟು :    
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©