Sunday 25 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಸುಮಾರ್ ಸುದ್ದಿ

ಮಹದೇಶ್ವರ ಬೆಟ್ಟಕ್ಕೆ ಭಕ್ತರಿಗೆ ಪ್ರವೇಶ ಇಲ್ಲ

ಕೊರೋನಾ ವೈರಸ್ ಸೋಂಕು ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಇಂದು, ನಾಳೆ ಮತ್ತು ನಾಡಿದ್ದು ದೇವಸ್ಥಾನ ಬಂದ್ ಆಗಲಿದೆ. ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ, ಎಣ್ಣೆ ಮಜ್ಜನ, 108 ಕುಂಭಾಭಿಷೇಕ ಸಹಸ್ರ ಅಭಿಷೇಕ ನಡೆಯಲಿದೆ.

2020-08-17 05:30:00, ajeyanews.com

Ajeya Imageಬೆಂಗಳೂರು, ಆ. 17: 
ಕೊರೋನಾ ವೈರಸ್ ಸೋಂಕು ಹರಡುವುದು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜನರ ಜಿಲ್ಲೆಯಲ್ಲಿರುವ ಪ್ರಮುಖ ದೇವಸ್ಥಾನಗಳನ್ನು ಇಂದಿನಿಂದ ಮೂರು ದಿನಗಳ ಕಾಲ ಬಂದ್ ಮಾಡಲಾಗಿದೆ.
ಬೆನಕನ ಅಮಾವಾಸ್ಯೆ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಈ ಆದೇಶ ಜಾರಿಮಾಡಲಾಗಿದೆ. ಕೊರೋನಾ ವೈರಸ್ ಸೋಂಕು ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಇಂದು, ನಾಳೆ ಮತ್ತು ನಾಡಿದ್ದು ದೇವಸ್ಥಾನ ಬಂದ್ ಆಗಲಿದೆ. ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ, ಎಣ್ಣೆ ಮಜ್ಜನ, 108 ಕುಂಭಾಭಿಷೇಕ ಸಹಸ್ರ ಅಭಿಷೇಕ ನಡೆಯಲಿದೆ.
ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಹೊರತು ಪಡಿಸಿ ಉಳಿದಂತೆ ಸಾರ್ವಜನಿಕರಿಗೆ ಮಾತ್ರ ಪ್ರವೇಶ ನಿರ್ಬಂಧಿಸಲಾಗಿದೆ. 

(Image courtesy: Internet)

ಪದಗಂಟು :       
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©