Sunday 25 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಮೀಸಲು ಅರಣ್ಯ ಘೋಷಣೆಗೆ ಮುನ್ನ ಜನಾಭಿಪ್ರಾಯ ಸಂಗ್ರಹಿಸಿ: ಒತ್ತಾಯ

ಮುಳ್ಳಯ್ಯನಗಿರಿ ಸಂರಕ್ಷಣಾ ಮೀಸಲು ಪ್ರದೇಶ ಘೋಷಣೆಗೂ ಮುನ್ನ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಭಾಗದ ಗ್ರಾಮಗಳಲ್ಲಿ ಸಭೆ ನಡೆಸಿ ಅಹವಾಲು ಆಲಿಸಿ, ಸಾಧಕಬಾಧಕ ಚರ್ಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಎಂ.ಎಲ್. ಮೂರ್ತಿ ಒತ್ತಾಯಿಸಿದ್ದಾರೆ.

2020-08-28 05:30:00, ajeyanews.com

Ajeya Imageಚಿಕ್ಕಮಗಳೂರು ಆ.28:
ಮುಳ್ಳಯ್ಯನ ಗಿರಿ ಅರಣ್ಯ ಪ್ರದೇಶವನ್ನು ಸಂರಕ್ಷಣಾ ಸೂಕ್ಷ್ಮ ವಲಯ ಎಂದು ಘೋಷಿಸದಂತೆ ಈ ಭಾಗದ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಮುಳ್ಳಯ್ಯನಗಿರಿ ಸಂರಕ್ಷಣಾ ಮೀಸಲು ಪ್ರದೇಶ ಘೋಷಣೆಗೂ ಮುನ್ನ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಭಾಗದ ಗ್ರಾಮಗಳಲ್ಲಿ ಸಭೆ ನಡೆಸಿ ಅಹವಾಲು ಆಲಿಸಿ, ಸಾಧಕಬಾಧಕ ಚರ್ಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಎಂ.ಎಲ್. ಮೂರ್ತಿ ಒತ್ತಾಯಿಸಿದ್ದಾರೆ.

ಮೀಸಲು ಪ್ರದೇಶ ವ್ಯಾಪ್ತಿಯ ಗ್ರಾಮಗಳ ಮುಖಂಡರ ಸಭೆಯಲ್ಲಿ ಮಾತನಾಡಿ ಈ ಪ್ರದೇಶವನ್ನು ಸಂರಕ್ಷಣಾ ಸೂಕ್ಷ್ಮ ವಲಯ ಎಂದು ಘೋಷಿಸಿದರೆ ಈ ಭಾಗದಲ್ಲಿ ಓಡಾಟಕ್ಕೂ ಸಮಸ್ಯೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಪ್ರದೇಶ ವ್ಯಾಪ್ತಿಯ ಗ್ರಾಮಗಳಲ್ಲಿ ನಮೂನೆ 57 ಹಾಗೂ 94ಸಿ ಅಡಿ ಅರ್ಜಿ ಸಲ್ಲಿಸಿರುವವರ ಪಟ್ಟಿ, ಗ್ರಾಮವಾರು ಗೋಮಾಳ ಪಟ್ಟಿ ಕಲೆ ಹಾಕಬೇಕು. ಕಾನೂನು ಹೋರಾಟಕ್ಕೆ ಪೂರಕ ತಯಾರಿ ಮಾಡಿಕೊಳ್ಳಬೇಕು. ಸಂರಕ್ಷಣಾ ಮೀಸಲು ಪ್ರದೇಶ ಘೋಷಣೆ ಮಾಡದಂತೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅವರಿಗೂ ಮನವಿ ಸಲ್ಲಿಸಬೇಕು ಎಂದರು.

ಜೆಡಿಎಸ್ ಮುಖಂಡ ಹೆಚ್. ಹೆಚ್. ದೇವರಾಜ್ ಮಾತನಾಡಿ, ಜನಪ್ರತಿನಿಧಿಗಳು, ಅಧಿಕಾರಿಗಳು ಜನರ ಬದುಕಿನ ಜತೆ ಚೆಲ್ಲಾಟವಾಡಬಾರದು. ಪರಿಸರವಾದಿಗಳ ಮಾತಿಗೆ ಮಣೆ ಹಾಕಿ ಜನರನ್ನು ಸಂಕಷ್ಟಕ್ಕೆ ದೂಡಬಾರದು ಎಂದರು.

ಹೋರಾಟ ಸಮಿತಿಯ ಮುಖಂಡ ವಿಜಯಕುಮಾರ್ ಮಾತನಾಡಿ 16 ಸಾವಿರ ಎಕರೆಯನ್ನು ಸಂರಕ್ಷಣಾ ಮೀಸಲು ಪ್ರದೇಶವಾಗಿಸುವ ಹುನ್ನಾರ ಮೂರು ವರ್ಷಗಳಿಂದ ರಹಸ್ಯವಾಗಿ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖಂಡರಾದ ಗಾಯತ್ರಿ ಶಾಂತೇಗೌಡ, ರಾಧಾ ಸುಂದರೇಶ್, ಮುರುಗನ್, ಮಂಜೇಗೌಡ, ಸುರೇಶ್, ಪರಮೇಶ್ ಇದ್ದರು.

ಪದಗಂಟು :      
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©