Sunday 25 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಬೆಂಗಳೂರು ಗಲಭೆ: ಮುಂದುವರೆದ ಮ್ಯಾಜಿಸ್ಟ್ರೇಟ್ ತನಿಖೆ

ಸಾಮಾನ್ಯ ಜನರು ಸೇರಿದಂತೆ 53 ಪೊಲೀಸ್ , 15 ಕೆಎಸ್‌ಆರ್‌ಪಿ ಸಿಬ್ಬಂದಿ ಸೇರಿ ಒಟ್ಟು 70 ಮಂದಿಗೆ ಗಾಯಗಳಾಗಿವೆ ಮತ್ತು ಪ್ರಕರಣದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಗಲಭೆಯಲ್ಲಿ 126 ವಾಹನಗಳು, ಕಟ್ಟಡಗಳು ಬೆಂಕಿಯಿಂದ ಸುಟ್ಟು ಹೋಗಿವೆ.

2020-08-28 05:30:00, ajeyanews.com

Ajeya Imageಬೆಂಗಳೂರು,ಆ.28:
ದೇವರಜೀವನಹಹಳ್ಳಿ ಹಾಗೂ ಕಾಡುಗೊಂಡನಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಯನ್ನು ಚುರುಕುಗೊಳಿಸಲಾಗಿದೆ.

ಜಿಲ್ಲಾಧಿಕಾರಿ ಶಿವಮೂರ್ತಿ ಮ್ಯಾಜಿಸ್ಟ್ರೇಟ್ ತನಿಖೆಯನ್ನು ನಿನ್ನೆಯಿಂದ ಆರಂಭಿಸಿದ್ದು ಇಂದೂ ಕೂಡ ಮಾಹಿತಿ ಸಂಗ್ರಹ ಮುಂದುವರೆಸಿದ್ದಾರೆ.

ದೇವರಜೀವನಹಹಳ್ಳಿ ಹಾಗೂ ಕಾಡುಗೊಂಡನಹಳ್ಳಿ ಹಳ್ಳಿ ಗಲಭೆ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದರು. ಅಲ್ಲದೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಾರ್ಗಸೂಚಿಯಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭ ಮಾಡುತ್ತೇನೆ. ಸೆ.2ರಿಂದ ಈ ಪ್ರಕರಣದ ಸಂಪೂರ್ಣ ವಿಚಾರಣೆ ಪ್ರಾರಂಭವಾಗುತ್ತದೆ. ಮ್ಯಾಜಿಸ್ಟ್ರೇಟ್ ತನಿಖೆಯ ವರದಿ ನೀಡಲು ಸರ್ಕಾರ ಮೂರು ತಿಂಗಳು ಗಡುವು ನೀಡಿದೆ ಎಂದು ಅವರು ಹೇಳಿಕೆ ನೀಡಿದ್ದಾರೆ.

ಗಲಭೆ ಪ್ರಕರಣ ಸಂಬಂಧ ಈವರೆಗೆ ಒಟ್ಟು 388 ವ್ಯಕ್ತಿಗಳನ್ನು ಬಂಧಿಸಲಾಗಿದೆ. 55 ಡಿಜೆ ಹಳ್ಳಿ ಹಾಗೂ 16 ಕೆಜೆ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. 

ಸಾಮಾನ್ಯ ಜನರು ಸೇರಿದಂತೆ 53 ಪೊಲೀಸ್ , 15 ಕೆಎಸ್‌ಆರ್‌ಪಿ ಸಿಬ್ಬಂದಿ ಸೇರಿ ಒಟ್ಟು 70 ಮಂದಿಗೆ ಗಾಯಗಳಾಗಿವೆ ಮತ್ತು ಪ್ರಕರಣದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಗಲಭೆಯಲ್ಲಿ 126 ವಾಹನಗಳು, ಕಟ್ಟಡಗಳು ಬೆಂಕಿಯಿಂದ ಸುಟ್ಟು ಹೋಗಿವೆ. ಸುಟ್ಟ ವಾಹನಗಳ ನಷ್ಟದ ಒಟ್ಟು ಮೊತ್ತ ಸಾರಿಗೆ ಅಧಿಕಾರಿಗಳು ಅಂದಾಜಿಸಿ ಮಾಹಿತಿ ನೀಡಲಿದ್ದಾರೆ.

ಗೋಲಿಬಾರ್ ಮತ್ತು ಗಲಭೆಯ ಸಂಪೂರ್ಣ ವಿಚಾರಣೆಯ ಬಳಿಕ ವರದಿ ನೀಡುತ್ತೇನೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು, ಹೇಳಿಕೆಗಳು, ಸಾಕ್ಷಿಗಳನ್ನು ಜಿಲ್ಲಾಧಿಕಾರಿ ಕಚೇರಿಗೆ ನೀಡಬಹುದು. ನೀಡಿದ ಮಾಹಿತಿಯನ್ನು ನಾವು ಗೌಪ್ಯವಾಗಿಡಲಾಗುವುದು ಎಂದು ಭರವಸೆ ನೀಡಿದರು.

ಪದಗಂಟು :        
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©