Sunday 25 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಸೆ.26: ವಿಶ್ವಸಂಸ್ಥೆಯಲ್ಲಿ ಮೋದಿ ಮಾತು

ವಿಶ್ವಸಂಸ್ಥೆಯ 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಾಮಾನ್ಯ ಸಭೆಯ ಅಧಿವೇಶನ ನಡೆಯಲಿದೆ.

2020-09-02 05:30:00, ajeyanews.com

Ajeya Imageವಿಶ್ವಸಂಸ್ಥೆ,ಸೆ.2: 
ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ 75ನೇ ಅಧಿವೇಶನವು ಸೆ. 22ರಿಂದ 29 ರವರೆಗೆ ನಡೆಯಲಿದ್ದು, ಪ್ರಧಾನಿ ನರೇಂದ್ರಮೋದಿ ಅವರು ಸಾಮಾನ್ಯ ಸಭೆಯಲ್ಲಿ ಮಾತನಾಡುವ ಸಾಧ್ಯತೆಗಳಿವೆ. ಈ ಬಾರಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಲಿರುವ ನಾಯಕರ ತಾತ್ಕಾಲಿಕ ಪಟ್ಟಿ ಸಿದ್ಧವಾಗಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರೂ ಇದೆ.

ವಿಶ್ವಸಂಸ್ಥೆಯ 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಾಮಾನ್ಯ ಸಭೆಯ ಅಧಿವೇಶನ ನಡೆಯಲಿದೆ. ಕೊರೋನಾ ವೈರಸ್‌ನಿಂದಾಗಿ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲು ನಿರ್ಣಯ ಕೈಗೊಳ್ಳಲಾಗಿದ್ದು, ಪ್ರಮುಖ ದೇಶಗಳ ನಾಯಕರು ತಮ್ಮ ಭಾಷಣದ ವಿಡಿಯೊಗಳನ್ನು ಸಾಮಾನ್ಯ ಸಭೆಗೆ ಮುಂಚಿತವಾಗಿ ಕಳುಹಿಸಲಿದ್ದಾರೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಮತ್ತು ಸಮ್ಮೇಳನ ನಿರ್ವಹಣಾ ಇಲಾಖೆಯು ಸಾಮಾನ್ಯ ಸಭೆಯ 75ನೇ ಅಧಿವೇಶನದಲ್ಲಿ ಮಾತನಾಡಲಿರುವ ಕೆಲ ನಾಯಕರ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಸೇರ್ಪಡೆಯಾಗಿದ್ದು, ಸೆ. 26 ರಂದು ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆಗಳಿವೆ.

ಈ ಪಟ್ಟಿಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೊನಾರೊ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಇರಾನ್ ಅಧ್ಯಕ್ಷ ಹಸನ್ ರೌಹಾನಿ, ಫ್ರಾನ್ಸ್ ಅಧ್ಯಕ್ಷ ಎಮ್ಯಾನುವಲ್ ಮ್ಯಾಕ್ರನ್ ಹೆಸರು ಕೂಡ ಇದೆ. 

ಆದರೆ, ಈ ಪಟ್ಟಿ ತಾತ್ಕಾಲಿಕವಾಗಿದ್ದು ಪರಿಷ್ಕರಣೆ ಆಗುವ ಸಾಧ್ಯತೆಗಳೂ ಇವೆ.


ಪದಗಂಟು :         
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©