Sunday 25 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಕಲ್ಲು-ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು

ಜಲ್ಲಿ ಕ್ರಷರ್ ಬೆಡ್ ಮೇಲೆ ಸಂಗ್ರಹವಾಗಿದ್ದ ಕಲ್ಲು ಮಣ್ಣು ಕಾರ್ಮಿಕರ ಮೇಲೆ ಕುಸಿದು ಬಿದ್ದು ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

2020-09-02 05:30:00, ajeyanews.com

Ajeya Image(Representative image)(Image courtesy: Internet)

ಶಿವಮೊಗ್ಗ, ಸೆ.2: 

ಜಲ್ಲಿ ಕ್ರಷರ್‌ವೊಂದರಲ್ಲಿ ಸಂಭವಿಸಿದ ದುರಂತದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಗೆಜ್ಜೇನಹಳ್ಳಿಯಲ್ಲಿ ನಡೆದಿದೆ.

ಬಿಹಾರ ಮೂಲದ ಕಾರ್ಮಿಕರಾದ ಜಿಕೋಲಾಂಗ್ (25), ಟ್ರೆನಿಕ್ ಟೋಜ್ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನ ಜಲ್ಲಿ ಕ್ರಷರ್ ಬೆಡ್ ಮೇಲೆ ಸಂಗ್ರಹವಾಗಿದ್ದ ಕಲ್ಲು ಮಣ್ಣು ಕಾರ್ಮಿಕರ ಮೇಲೆ ಕುಸಿದು ಬಿದ್ದು ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಜಿಕೋಲಾಂಗ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಟ್ರೆನಿಕ್ ಟೋಜ್ ಚಿಕಿತ್ಸೆ ಫಲಕಾರಿಯಾಗದೇ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿನೋಬನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪದಗಂಟು :      
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©