Wednesday 28 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಎಪಿಎಂಸಿಯಲ್ಲಿ ತೂಕದ ಯಂತ್ರ ಸ್ಥಾಪಿಸಿ

ಎಪಿಎಂಸಿ ಪ್ರಾಂಗಣದಲ್ಲಿ ಕಳೆದ ಒಂದು ವರ್ಷದಿಂದ ತೂಕದ ಯಂತ್ರದ ವ್ಯವಸ್ಥೆ ಇಲ್ಲದೆ ವರ್ತಕರು ಮತ್ತು ರೈತರು ಪರದಾಡುವಂತಾಗಿದೆ

2020-09-24 05:30:00, ajeyanews.com

Ajeya Imageಶಿವಮೊಗ್ಗ, ಸೆ.24: 
ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ತೂಕದ ಯಂತ್ರ ವ್ಯವಸ್ಥೆ ಮಾಡುವಂತೆ ಜಿಲ್ಲಾ ಮೆಕ್ಕೆಜೋಳ ವರ್ತಕರ ಸಂಘ ಎಪಿಎಂಸಿ ಅಧ್ಯಕ್ಷರಿಗೆ ಇಂದು ಮನವಿ ಮಾಡಿಕೊಂಡಿದೆ.

ಎಪಿಎಂಸಿ ಪ್ರಾಂಗಣದಲ್ಲಿ ಕಳೆದ ಒಂದು ವರ್ಷದಿಂದ ತೂಕದ ಯಂತ್ರದ ವ್ಯವಸ್ಥೆ ಇಲ್ಲದೆ ವರ್ತಕರು ಮತ್ತು ರೈತರು ಪರದಾಡುವಂತಾಗಿದೆ. ವರ್ತಕರಿಗೆ ಮತ್ತು ರೈತರಿಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಅನೇಕ ಬಾರಿ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದನ್ನು ಗಮನಿಸಿದರೆ ಇದರ ಹಿಂದೆ ಬಾರಿ ಹುನ್ನಾರ ಅಡಗಿದೆ ಎಂದು ಸಂಘ ಅನುಮಾನ ವ್ಯಕ್ತಪಡಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಮಾರುಕಟ್ಟೆಗೆ ಹೊಸ ಮೆಕ್ಕೆಜೋಳ ಬರಲಿದೆ. ರೈತರಿಗೆ ತೂಕದ ಯಂತ್ರ ವ್ಯವಸ್ಥೆ ಇಲ್ಲದೆ ಇದ್ದರೆ ಬಾರಿ ತೊಂದರೆ ಅನುಭವಿಸಬೇಕಾಗುತ್ತದೆ. ರೈತರಿಗೆ ಅನಾನುಕೂಲ ಆಗುವುದನ್ನು ತಪ್ಪಿಸಲು ಸಂಬಂಧಪಟ್ಟವರು ಕೂಡಲೇ ಗಮನ ಹರಿಸಿ ತೂಕದ ಯಂತ್ರ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದೆ.

ಜಿಲ್ಲಾಡಳಿತ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವುದರೊಂದಿಗೆ ರೈತರು ಮತ್ತು ವರ್ತಕರಿಗೆ ಆಗುತ್ತಿರುವ ಅನಾನುಕೂಲವನ್ನು ಸರಿಪಡಿಸಬೇಕು ಎಂದು ಸಂಘದ ಅಧ್ಯಕ್ಷ ಶಂಕರಪ್ಪ, ಮಲ್ಲಿಕಾರ್ಜುನ್, ಗುರುಬಸಪ್ಪ, ಚೇತನ್ ಕುಮಾರ್ ಮತ್ತಿತರರು ಮನವಿ ಮಾಡಿದ್ದಾರೆ.

ಪದಗಂಟು :     
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©