Wednesday 28 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಕಾರ್ಮಿಕರಿಗೆ ಕೋವಿಡ್ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಸೆಸ್ ಸಂಗ್ರಹದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಗಟ್ಟಿ ಅಕ್ರಮ ಕಟ್ಟಡಗಳನ್ನು ಸೆಸ್ ವ್ಯಾಪ್ತಿಗೆ ತರಬೇಕು.ಆರೋಗ್ಯ ಸೇವೆ ಖಾಸಗೀಕರಣ ನಿಲ್ಲಿಸಿ ಖಾಸಗಿ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಲೂಟಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು

2020-09-24 05:30:00, ajeyanews.com

Ajeya Imageಚಿತ್ರದುರ್ಗ.ಸೆ.24;
ಸಂಕಷ್ಟದಲ್ಲಿರುವ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಮಗ್ರ ಕೋವಿಡ್ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಿಐಟಿಯು ವತಿಯಿಂದ ಕಟ್ಟಡ ನಿರ್ಮಾಣ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು.

ಕೊರೋನಾ ಎಂಬ ಮಹಾಮಾರಿ ಜಗತ್ತಿನೆಲ್ಲೇಡೆ ಆವರಿಸಿರುವುದರಿಂದ ಕಟ್ಟಡ ನಿರ್ಮಾಣ ಕಾರ್ಮಿಕರು ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಅವರುಗಳಿಗೆ ವಾರಕ್ಕೆ 2000 ರೂ.ನಂತೆ ಕನಿಷ್ಟ 6 ತಿಂಗಳವರೆಗೆ ಕೋವಿಡ್ ಪರಿಹಾರ ಘೋಷಿಸಬೇಕು. ಕೋವಿಡ್ ಹಿನ್ನೆಲೆಯಲ್ಲಿ ಮದುವೆ ಸಹಾಯಧನ, ಪಿಂಚಣಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಬೇಕು. ಸಹಾಯಧನಕ್ಕಾಗಿ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಸೇವಾಸಿಂಧೂ ಕೇಂದ್ರಗಳಲ್ಲಿ ಮತ್ತು ಕಂಪ್ಯೂಟರ್ ಸೆಂಟರ್ ಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಸೆಸ್ ಸಂಗ್ರಹದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಗಟ್ಟಿ ಅಕ್ರಮ ಕಟ್ಟಡಗಳನ್ನು ಸೆಸ್ ವ್ಯಾಪ್ತಿಗೆ ತರಬೇಕು.ಆರೋಗ್ಯ ಸೇವೆ ಖಾಸಗೀಕರಣ ನಿಲ್ಲಿಸಿ ಖಾಸಗಿ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಲೂಟಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸಿಐಟಿಯು ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್ ಪೀರ್, ಬಿ.ಸಿ.ನಾಗರಾಜಚಾರಿ, ಷೇಕ್ ಕಲೀಂ ಉಲ್ಲಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.


ಪದಗಂಟು :        
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©