Tuesday 27 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಸುಮಾರ್ ಸುದ್ದಿ

ರೈತರ ಪರ ಎಸ್‌ಡಿಪಿಐ ರ‍್ಯಾಲಿ

ರೈತ ವಿರೋಧಿ ಕಾಯ್ದೆಗಳು ಜಾರಿಯಾಗಬಾರದು.ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್ ಮಯ ಮಾಡಲು ಹೊರಟಿವೆ.ಇದರಿಂದ ರೈತರು ಜೀತದಾಳುಗಳಾಗುತ್ತಾರೆ.

2020-09-25 05:30:00, ajeyanews.com

Ajeya Imageಶಿವಮೊಗ್ಗ, ಸೆ.25:
ರೈತರನ್ನು ಜೀತಕ್ಕೆ ತಳ್ಳುವ ಬಿಜೆಪಿ ನೀತಿ ಅತ್ಯಂತ ಅಪಾಯಕಾರಿ ಎಂದು ಆರೋಪಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಇಂದು ಕೆಇಬಿ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿ ಮಾನವ ಸರಪಳಿ ನಿರ್ಮಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ರೈತ ವಿರೋಧಿ ಕಾಯ್ದೆಗಳು ಜಾರಿಯಾಗಬಾರದು.ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್ ಮಯ ಮಾಡಲು ಹೊರಟಿವೆ.ಇದರಿಂದ ರೈತರು ಜೀತದಾಳುಗಳಾಗುತ್ತಾರೆ.ರೈತರ ಬದುಕಿನ ಜೊತೆ ಚೆಲ್ಲಾಟವಾಡುವ ಕಾಯ್ದೆಗಳು ಜಾರಿಯಾಗಬಾರದು.ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಮತ್ತು ರಾಜ್ಯ ಸರ್ಕಾರ ವಿಧಾನಸಭಾ ಅಧಿವೇಶನ ಮೊಟಕುಗೊಳಿಸಿರುವುದು ಜಾರಿಕೊಳ್ಳುವ ನೀತಿ ಅವಲಂಬಿಸಿದೆ ಎಂದು ದೂರಿದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಸಲೀಂಖಾನ್, ಅಲ್ಲಾಭಕ್ಷ್, ಖಲೀಂ, ಅಬ್ದುಲ್ ಮುಜೀಬ್, ಇಮ್ರಾನ್, ಅಮ್ಜದ್, ಫೈರೋಜ್ ಖಾನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಪದಗಂಟು :        
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©