Tuesday 27 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ರೈತವಿರೋಧಿ ಕಾಯ್ದೆ ಬೇಡ: ರಸ್ತೆತಡೆ

ಬಿಜೆಪಿ ಸರ್ಕಾರದ ಮಂತ್ರಿಯೇ ಮಸೂದೆಗಳನ್ನು ವಿರೋಧಿಸಿ ರಾಜೀನಾಮೆ ನೀಡಿದ್ದಾರೆ. ಪಂಜಾಬ್ ಮತ್ತು ಹರಿಯಾಣಗಳಲ್ಲಿ ಹೋರಾಟ ತೀವ್ರಗೊಂಡಿದೆ. ಯಾವುದೇ ಕಾರಣಕ್ಕೂ ಈ ಕಾಯ್ದೆಗಳು ಜಾರಿಯಾಗಬಾರದು

2020-09-25 05:30:00, ajeyanews.com

Ajeya Imageಶಿವಮೊಗ್ಗ, ಸೆ.25:
ರೈತವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಇಂದು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ತಡೆ ಚಳವಳಿ ನಡೆಸಿದರು.

ಕೇಂದ್ರ ಸರ್ಕಾರ ಮತ್ತು ಬಿಜೆಪಿ ಆಡಳಿತದ ರಾಜ್ಯ ಸರ್ಕಾರಗಳು ತರುತ್ತಿರುವ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ಭುಗಿಲೆದ್ದಿದೆ. ಬಿಜೆಪಿ ಸರ್ಕಾರದ ಮಂತ್ರಿಯೇ ಮಸೂದೆಗಳನ್ನು ವಿರೋಧಿಸಿ ರಾಜೀನಾಮೆ ನೀಡಿದ್ದಾರೆ. ಪಂಜಾಬ್ ಮತ್ತು ಹರಿಯಾಣಗಳಲ್ಲಿ ಹೋರಾಟ ತೀವ್ರಗೊಂಡಿದೆ. ಯಾವುದೇ ಕಾರಣಕ್ಕೂ ಈ ಕಾಯ್ದೆಗಳು ಜಾರಿಯಾಗಬಾರದು.ಪ್ರಧಾನಿ ರೈತಪರ ಎನ್ನುವುದೇ ಆದರೆ ರೈತರು, ಕಾರ್ಮಿಕರು, ದಲಿತರ ಜೊತೆ ಮಾತುಕತೆ ನಡೆಸಲಿ.ನಾವು ಸಮರ್ಥ ವಾದ ಮಂಡಿಸುತ್ತೇವೆ.ಅದನ್ನು ಬಿಟ್ಟು ಏಕಾಏಕಿ ಕಾಯ್ದೆಗಳನ್ನು ಹೊರತರುತ್ತಿರುವುದು ಸರಿಯಲ್ಲ.ಭೂಸುಧಾರಣೆ, ಎಪಿಎಂಸಿ, ಕಾರ್ಮಿಕ, ಅಗತ್ಯ ವಸ್ತು, ವಿದ್ಯುಚ್ಚಕ್ತಿ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ಪ್ರತಿಭಟನಕಾರರು ತಿಳಿಸಿದರು.

ರೈತ ಸಂಘದ ರಾಜ್ಯಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಈಶಣ್ಣ, ಶಿವಮೂರ್ತಿ, ಇ.ಬಿ.ಜಗದೀಶ್, ಹಾಲೇಶಪ್ಪ, ಇಟ್ಟೂರು ರಾಜು, ರಾಘವೇಂದ್ರ, ಬಿ.ಡಿ.ಮಂಜಪ್ಪ, ಬಿ.ಹೆಚ್.ರಾಮಚಂದ್ರಪ್ಪ ಸೇರಿದಂತೆ ಹಲವರಿದ್ದರು.

ಪದಗಂಟು :         
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©