Wednesday 28 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಸ್ವಯಂಪ್ರೇರಿತರಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಿ: ಜೆ.ಆರ್ ವಾಸುದೇವ್

ಕೊರೋನಾ ಸೋಂಕಿನಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕರು ಕಡ್ಡಾಯವಾಗಿ ಆರೋಗ್ಯ ಇಲಾಖೆಯ ನಿಯಮಗಳನ್ನು ಪಾಲಿಸುವುದರ ಜೊತೆಗೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯ

2020-10-07 05:30:00, ajeyanews.com

Ajeya Imageಶಿವಮೊಗ್ಗ, ಅ.7:
ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚುತ್ತಿದ್ದು ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕೊರೋನಾ ಪರೀಕ್ಷೆಗೆ ಒಳಗಾಗುವುದು ಅತ್ಯಂತ ಪ್ರಯೋಜನಕಾರಿ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜೆ.ಆರ್. ವಾಸುದೇವ್ ಹೇಳಿದರು.

ಜಿಲ್ಲಾಧಿಕಾರಿಗಳ ಆದೇಶ ಮತ್ತು ಅರೊಗ್ಯ ಇಲಾಖೆಯ ಸೂಚನೆಯಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಎಸ್‌ ಜೆ ಎಮ್ ಟೆಕ್ನಾಲಜಿ ಹಾಗೂ ನೆಪ್ಟುನ್ ಗ್ಯಾರೆಜ್ ಸಂಯುಕ್ತಾಶ್ರಯದಲ್ಲಿ ನೌಕರರು ಹಾಗೂ ಸಿಬ್ಬಂದಿಗಳಿಗೆ ಕೊರೋನಾ ರ‍್ಯಾಪಿಡ್ ಪರೀಕ್ಷೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾಮಾನ್ಯವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಪರೀಕ್ಷೆ ಮಾಡಿಸುವುದಾದರೆ 3,400ರೂ. ವರೆಗೂ ಖರ್ಚು ತಗುಲುವುದು ಆದರೆ ಸರ್ಕಾರವು ಸಾರ್ವಜನಿಕ ಹಿತ ದೃಷ್ಟಿಯಿಂದ ಉಚಿತವಾಗಿ ಆಯೋಜನೆ ಮಾಡಿದೆ. ಇದರ ಸೌಲಭ್ಯವನ್ನು ಸಾರ್ವಜನಿಕರು ಬಳಸಿಕೊಂಡು ಕೊರೋನಾ ಮುಕ್ತ ಭಾರತವನ್ನು ನಿರ್ಮಿಸಲು ಸಹಕರಿಸಬೇಕು. ಕೊರೋನಾ ಸೋಂಕಿನಿಂದ ತಪ್ಪಿಸಿಕೊಳ್ಳಲು ಸಾರ್ವಜನಿಕರು ಕಡ್ಡಾಯವಾಗಿ ಆರೋಗ್ಯ ಇಲಾಖೆಯ ನಿಯಮಗಳನ್ನು ಪಾಲಿಸುವುದರ ಜೊತೆಗೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಪದೇ ಪದೇ ಕೈತೊಳೆಯವುದರ ಮೂಲಕ ಖಾಯಿಲೆಯಿಂದ ದೂರ ಇರಬಹುದು ಎಂದರು.

ಯೂತ್ ಹಾಸ್ಟೆಲ್ ರಾಜ್ಯ ಘಟಕದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್ ಮಾತನಾಡಿದರು.

ಆರೋಗ್ಯ ಇಲಾಖೆಯ ಡಾ. ಚಂದ್ರಶೇಖರ್, ಡಾ.ಎಲಿ, ಕೊರೋನಾ ಹೆಲ್ತ್ ವಾರಿಯರ‍್ಸ್ ಸೇರಿದಂತೆ ನೆಪ್ಚುನ್ ಕಿಶೋರ್, ಗುರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪದಗಂಟು :       
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©