Tuesday 27 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಅನಿರ್ದಿಷ್ಟಾವಧಿ ಮುಷ್ಕರ ಹಿಂದಕ್ಕೆ

ಆರೋಗ್ಯ ಸಚಿವರ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಸಂಘದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಒಂದು ತಿಂಗಳ ಸಮಯ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ

2020-10-08 05:30:00, ajeyanews.com

Ajeya Image

ಶಿವಮೊಗ್ಗ, ಅ.8:
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ 14 ದಿನಗಳಿಂದ ನಡೆಸುತ್ತಿದ್ದ ವೈದ್ಯಕೀಯ ಗುತ್ತಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರವನ್ನು ತಾತ್ಕಾಲಿಕವಾಗಿ ಕೈಬಿಡಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಹೆಚ್.ವೈ. ವಿಶ್ವಾರಾಧ್ಯ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಒಂದು ತಿಂಗಳ ಕಾಲ ಮುಂದೂಡಲಾಗಿದೆ ಎಂದರು.

ಆರೋಗ್ಯ ಸಚಿವರ ನೇತೃತ್ವದಲ್ಲಿ ನಿನ್ನೆ ನಡೆದ ಸಭೆಯಲ್ಲಿ ಸಂಘದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಒಂದು ತಿಂಗಳ ಸಮಯ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಎಲ್ಲ ನೌಕರರು ಇಂದಿನಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಮುಷ್ಕರದ ದಿನಗಳಲ್ಲಿ ಕಡಿತವಾದ ವೇತನವನ್ನು ಪಾವತಿಸಲು ಕ್ರಮ ಕೈಗೊಳ್ಳಲು ಹಾಗೂ ಮುಷ್ಕರದ ಸಮಯದಲ್ಲಿ ಸೇವೆಯಿಂದ ವಜಾಗೊಂಡಿರುವ ನೌಕರರಿಗೆ ನೋಟಿಸ್ ನೀಡಿರುವುದನ್ನು ಹಿಂಪಡೆಯಲು ನಿನ್ನೆ ನಡೆದ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ ಎಂದರು.

ಸಂಘದ ರಾಜ್ಯಪ್ರಧಾನ ಕಾರ್ಯದರ್ಶಿ ಶ್ರೀಕಾಂತ್‌ ಸ್ವಾಮಿ, ಜಿಲ್ಲಾಧ್ಯಕ್ಷೆ ಡಾ.ಹೇಮಲತಾ, ಪ್ರಧಾನ ಕಾರ್ಯದರ್ಶಿ ಹೆಚ್.ಎನ್.ರುದ್ರೇಶ್ ಉಪಸ್ಥಿತರಿದ್ದರು.


ಪದಗಂಟು :      
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©