Sunday 13 June 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಹೋಂ ಸ್ಟೇಗಳ ನೋಂದಣಿ ಕಡ್ಡಾಯಕ್ಕೆ ಸೂಚನೆ : ಡಾ.ಬಗಾದಿಗೌತಮ್

2020-10-28 05:30:00, ajeyanews.com

Ajeya Image

ಚಿಕ್ಕಮಗಳೂರು, .28:

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ.ಬಗಾದಿಗೌತಮ್ ಸೂಚಿಸಿದ್ದಾರೆ.

ಅನಧಿಕೃತವಾಗಿ ಕೆಲವರು ಹೋಂ ಸ್ಟೇ ನಡೆಸುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ದೂರುಗಳು ಬಂದಿದ್ದು, ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳದೆ ಅಧಿಕೃತವಾಗಿ ಕಾರ್ಯನಿರ್ವಹಿಸುವುದು ಅಪರಾಧವಾಗುತ್ತದೆ. ಇಂತಹ ಹೋಂ ಸ್ಟೇಗಳು .30 ಒಳಗಾಗಿ ಪ್ರವಾಸೋದ್ಯಮ ಇಲಾಖೆಯ ಅಂತರ್ಜಾಲ ತಾಣದಲ್ಲಿ ನೋಂದಣಿ ಮಾಡಿಕೊಂಡು ಇಲಾಖೆಯ ಅನುಮೋದನೆ ಪಡೆಯ ಬೇಕೆಂದರು.

ಪ್ರವಾಸೋದ್ಯಮ ಇಲಾಖೆಯ ಅಂತರ್ಜಾಲ ತಾಣದಲ್ಲಿ ಹೋಂ ಸ್ಟೇ ನೋಂದಣಿ ಮಾಡಿಕೊಂಡು ಅನುಮೋದನೆ ಪಡೆಯದಿದ್ದಲ್ಲಿ ಅಂತಹ ಹೋಂ ಸ್ಟೇಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ಪದಗಂಟು :       
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©