Sunday 13 June 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೋನಾ ತಪಾಸಣಾ ಪ್ರಮಾಣ ಹೆಚ್ಚಿಸಿ

ಮೊದಲ ಹಂತದಲ್ಲಿ ಆದ್ಯತೆ ಮೇರೆಗೆ ಆರೋಗ್ಯ ಇಲಾಖೆ, ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದೆ.

2020-11-05 05:30:00, ajeyanews.com

Ajeya Imageಚಿಕ್ಕಮಗಳೂರು, ನ.5:
ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ತಪಾಸಣಾ ಪ್ರಮಾಣ ಹೆಚ್ಚಿಸುವ ಮೂಲಕ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೋವಿಡ್-19 ಲಸಿಕೆ ಸಂಬಂಧ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತ ಪ್ರಮಾಣವನ್ನು ತಗ್ಗಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಶ್ರಮವಹಿಸಿ ಕಾರ್ಯನಿರ್ವಹಿಸಬೇಕು ದಿನದಲ್ಲಿ ನಿಗದಿಪಡಿಸಿರುವ ಕೊರೋನಾ ತಪಾಸಣಾ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಜಿಲ್ಲೆಯ ಎಲ್ಲಾ ಭಾಗಗಳಲ್ಲಿ ಸೋಂಕಿನ ಸಂಪೂರ್ಣ ತಡೆಗೆ ಕ್ರಮವಹಿಸಬೇಕು ಎಂದರು.

ಭಾರತ ಸರ್ಕಾರವು ಕೋವಿಡ್-19 ಲಸಿಕೆಯನ್ನು ತಯಾರಿಸುವ ಹಂತದಲ್ಲಿದ್ದು, ಸರ್ಕಾರದ ಆದೇಶದಂತೆ ಮೊದಲ ಹಂತದಲ್ಲಿ ಆದ್ಯತೆ ಮೇರೆಗೆ ಆರೋಗ್ಯ ಇಲಾಖೆ, ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದೆ.

ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಎನ್-95 ಮಾಸ್ಕ್ ಗಳು ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗಳ ಕೊರತೆಯನ್ನು ನಿವಾರಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಪದಗಂಟು :        
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©