Sunday 13 June 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಸುಮಾರ್ ಸುದ್ದಿ

ರಾಜ್ಯೋತ್ಸವ ಹಿನ್ನೆಲೆ: ಕನ್ನಡ ಪುಸ್ತಕ ರಿಯಾಯ್ತಿ ಮಾರಾಟ

ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯುತ್ತವೆ.

2020-11-05 05:30:00, ajeyanews.com

Ajeya Imageಚಿಕ್ಕಮಗಳೂರು, ನ.5: 
ರಾಜ್ಯೋತ್ಸವ ಹಿನ್ನೆಲೆ ನವೆಂಬರ್ ತಿಂಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯುತ್ತವೆ.

ಕನ್ನಡ ಪುಸ್ತಕ ಪ್ರಾಧಿಕಾರದ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ ವೈದ್ಯಕೀಯ ಪ್ರಾಚೀನ ಕನ್ನಡ ಸಾಹಿತ್ಯ ಜಾನಪದ, ಪರಿಸರ ಕೃಷಿ ಇತ್ಯಾದಿ ಪುಸ್ತಕಗಳನ್ನು ವೆಬ್‌ ಸೈಟ್‌ನ ಮೂಲಕ ಹಣ ಪಾವತಿಸಿ ಅಂಚೆ ಮೂಲಕ ಪುಸ್ತಕಗಳನ್ನು ಪಡೆಯಬಹುದಾಗಿದೆ ಎಂದು ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್‌ಸಿಂಗ್ ತಿಳಿಸಿದ್ದಾರೆ.

(Image courtesy: Internet)

ಪದಗಂಟು :     
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©