Wednesday 02 December 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಸುಮಾರ್ ಸುದ್ದಿ

ಫ್ಯಾಕ್ಟರಿ ಧೂಳು: ಚಿಕ್ಕಮಗಳೂರಿನಲ್ಲಿ ಗ್ರಾಮಸ್ಥರ ಪ್ರತಿಭಟನೆ

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮಾಜಿ ಸಚಿವ ಸಿ.ಟಿ ರವಿ ಅವರಿಗೆ ಮನವಿ ಸಲ್ಲಿಸಿದ್ದು, ಯಾವುದೇ ಪ್ರಯೋಜನವಾಗಿಲ್ಲ ಹಾಗಾಗಿ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.

2020-11-17 05:30:00, ajeyanews.com

Ajeya Imageಚಿಕ್ಕಮಗಳೂರು, ನ.17: 

ಕಾರ್ಖಾನೆವೊಂದರಿಂದ ಧೂಳು ಬರುತ್ತಿರುವುದನ್ನು ವಿರೋಧಿಸಿ ಗೌಡನಹಳ್ಳಿಯ ಗ್ರಾಮಸ್ಥರು ಫ್ಯಾಕ್ಟರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ನಿರತರನ್ನುದ್ದೇಶಿಸಿ ಗ್ರಾಮಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮಣ್‌ ಗೌಡ ಮಾತನಾಡಿ, ಧೂಳಿನಿಂದ ಜನರಿಗೆ ತುಂಬಾ ತೊಂದರೆಯಾಗುತ್ತಿದೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದರು.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮಾಜಿ ಸಚಿವ ಸಿ.ಟಿ ರವಿ ಅವರಿಗೆ ಮನವಿ ಸಲ್ಲಿಸಿದ್ದು, ಯಾವುದೇ ಪ್ರಯೋಜನವಾಗಿಲ್ಲ ಹಾಗಾಗಿ ಪ್ರತಿಭಟನೆ ನಡೆಸುತ್ತಿರುವುದಾಗಿ ಹೇಳಿ, ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು. 

ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಬೇಕೆಂದು ಗೌಡನಹಳ್ಳಿ ಲಕ್ಷö್ಮಮ್ಮ ಒತ್ತಾಯಿಸಿದರು. ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೆಂಚೇಗೌಡ,ದಮಯಂತಮ್ಮ ಗ್ರಾಮಸ್ಥರಾದ ಮೋಹನ್, ಮರೀಗೌಡ, ಮಲ್ಲಮ್ಮ ಇದ್ದರು.

ಪದಗಂಟು :       
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©