Wednesday 02 December 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಸುಗಮ ಸಂಚಾರ ವ್ಯವಸ್ಥೆಗೆ ಕ್ರಮ: ಮೇಯರ್

ಕನ್ಸರ್‌ ವೆನ್ಸಿ ಅಭಿವೃದ್ಧಿ ಪಡಿಸಿದ ಜಾಗದಲ್ಲಿ ದ್ವಿ ಚಕ್ರವಾಹನಕ್ಕೆ ಅವಕಾಶ ಕಲ್ಪಿಸುವುದರ ಜೊತೆಗೆ ಸುಗಮ ಸಂಚಾರಕ್ಕೆ ಯಾವ ರೀತಿ ಕ್ರಮಕೈಗೊಳ್ಳಬೇಕು ಎಂದು ಚರ್ಚಿಸಿ, ಜಿಲ್ಲಾಧಿಕಾರಿಗಳಿಂದ ಆದೇಶ ನೀಡುವ ಬಗ್ಗೆ ತೀರ್ಮಾನಿಸಲಾಗುವುದು

2020-11-18 05:30:00, ajeyanews.com

Ajeya Imageಶಿವಮೊಗ್ಗ, ನ.18:
ನಗರದ ನಂಜಪ್ಪ ಆಸ್ಪತ್ರೆ, ಸರ್ಜಿ ಆಸ್ಪತ್ರೆ , ಮ್ಯಾಕ್ಸ್ ಆಸ್ಪತ್ರೆ, ಮಲ್ನಾಡ್ ಡಯಾಗ್ನೋಸಿಸ್, ವಾಸಲ್ಯ ಆಸ್ಪತ್ರೆ ಸೇರಿದಂತೆ ರತ್ನಮ್ಮ ಮಾದವರಾವ್ ರಸ್ತೆ ಮತ್ತು ನಂಜಪ್ಪ ಆಸ್ಪತ್ರೆ ಡೌನ್ ರಸ್ತೆ, ತಿಲಕ್ ನಗರ, ಮೊದಲಾದೆಡೆ ಪಾರ್ಕಿಂಗ್ ವ್ಯವಸ್ಥೆಗೆ ತೊಂದರೆಯಾಗಿದ್ದು, ಈ ಬಗ್ಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಇಂದು ಮೇಯರ್ ನೇತೃತ್ವದ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳ ತಂಡ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಅಧಿಕಾರಿಗಳ ತಂಡ ಇಂದು ಪರಿಶೀಲನೆ ನಡೆಸಿ, ನಾಳೆ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಮತ್ತು ಏಕಮುಖ ಸಂಚಾರದ ಬಗ್ಗೆ ಹಿರಿಯ ಅಧಿಕಾರಿಗಳ ಸಭೆ ನಡೆಯಲಿದ್ದು, ಕನ್ಸರ್‌ ವೆನ್ಸಿ ಅಭಿವೃದ್ಧಿ ಪಡಿಸಿದ ಜಾಗದಲ್ಲಿ ದ್ವಿ ಚಕ್ರವಾಹನಕ್ಕೆ ಅವಕಾಶ ಕಲ್ಪಿಸುವುದರ ಜೊತೆಗೆ ಸುಗಮ ಸಂಚಾರಕ್ಕೆ ಯಾವ ರೀತಿ ಕ್ರಮಕೈಗೊಳ್ಳಬೇಕು ಎಂದು ಚರ್ಚಿಸಿ, ಜಿಲ್ಲಾಧಿಕಾರಿಗಳಿಂದ ಆದೇಶ ನೀಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಉಪ ಮೇಯರ್ ಸುರೇಖಾ ಮುರಳೀಧರ್, ಆಯುಕ್ತರಾದ ಚಿದಾನಂದ್ ವಠಾರೆ, ಡಿವೈಎಸ್‌ಪಿ ಈಶ್ವರ್‌ನಾಯಕ್, ಪಾಲಿಕೆ ಸದಸ್ಯರಾದ ಚನ್ನಬಸಪ್ಪ, ಜ್ಞಾನೇಶ್ವರ್, ಪ್ರಭು, ಉಪ ಆಯುಕ್ತ ಪ್ರಮೋದ್ ಹಾಗೂ ಪಾಲಿಕೆಯ ಅಧಿಕಾರಿಗಳಿದ್ದರು. 

ಪದಗಂಟು :       
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©