Sunday 13 June 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ರಸ್ತೆ ಡಾಂಬರೀಕರಣಕ್ಕೆ ಸಚಿವ ಈಶ್ವರಪ್ಪ ಚಾಲನೆ

ಸುಮಾರು 200 ಮೀಟರ್ ಉದ್ದದ ರಸ್ತೆ ದುರಸ್ತಿ ಹಾಗೂ 305 ಮೀಟರ್ ಉದ್ದದ ಬಾಕ್ಸ್ ಚರಂಡಿ ಕಾಮಗಾರಿಯು ಸುಮಾರು 20 ಲಕ್ಷ ರೂ.ಗಳ ವೆಚ್ಚದಲ್ಲಿ ನಡೆಯಲಿದೆ.

2020-11-19 05:30:00, ajeyanews.com

Ajeya Imageಶಿವಮೊಗ್ಗ. ನ.19: 
ನಗರದ ವಾರ್ಡ್ ನಂ.29ರ ಲೋಕೋಪಯೋಗಿ ಇಲಾಖೆ ವಸತಿ ಗೃಹಗಳ ರಸ್ತೆಯ ಡಾಂಬರೀಕರಣ ಕಾಮಗಾರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 200 ಮೀಟರ್ ಉದ್ದದ ರಸ್ತೆ ದುರಸ್ತಿ ಹಾಗೂ 305 ಮೀಟರ್ ಉದ್ದದ ಬಾಕ್ಸ್ ಚರಂಡಿ ಕಾಮಗಾರಿಯು ಸುಮಾರು 20 ಲಕ್ಷ ರೂ.ಗಳ ವೆಚ್ಚದಲ್ಲಿ ನಡೆಯಲಿದೆ. ಸ್ಥಳೀಯ ಲೋಕೋಪಯೋಗಿ ವಸತಿ ಗೃಹಗಳು ತುಂಬಾ ಹಳೆಯದಾಗಿದ್ದು, ಮಳೆಗಾಲದಲ್ಲಿ ಸೋರುತ್ತಿವೆ ಎಂದು ಸಚಿವರ ಗಮನಕ್ಕೆ ತಂದಾಗ ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ಲ್ಯಾನ್ ಮಾಡಿಸಿ ದುರಸ್ತಿ ಮಾಡಿಸಿಕೊಡಲಾಗುವುದು ಎಂದರು.

ವಾರ್ಡ್ ನ ಪಾಲಿಕೆ ಸದಸ್ಯೆ ಸುನಿತಾ ಕೆ.ವಿ.ಅಣ್ಣಪ್ಪ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ, ಬಿಜೆಪಿ ಮುಖಂಡ ಕೆ.ವಿ. ಅಣ್ಣಪ್ಪ, ಜಗದೀಶ್, ನಾಗರಾಜ್, ಶ್ರೀನಿವಾಸ್, ಕೆ.ಎಸ್. ಈಶ್ವರಪ್ಪ ಯಂಗ್ ಬ್ರಿಗೇಡ್ ಹಾಗೂ ಬಿಜೆಪಿ ಮುಖಂಡ ಹೆಚ್.ಎನ್. ಮಂಜುನಾಥ್ ಹಾಗೂ ಶಿವು, ಧನಂಜಯ, ಮಂಜುನಾಥ್, ರವಿಕುಮಾರ್ ಸೇರಿದಂತೆ ಸ್ಥಳೀಯರು ಹಾಜರಿದ್ದರು.

ಪದಗಂಟು :        
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©