Sunday 13 June 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಸುಮಾರ್ ಸುದ್ದಿ

ಕೃಷಿ ಆದಾಯ ಹೆಚ್ಚಿಸಲು ನೂತನ ತಂತ್ರಜ್ಞಾನ ಸಹಕಾರಿ

ರೈತರಿಗೆ ಕೃಷಿಯಲ್ಲಿ ಹವಾಮಾನ ವೈಪರೀತ್ಯದಿಂದ ಆಗುವ ನಷ್ಟವನ್ನು ತಗ್ಗಿಸಲು ಕೇಂದ್ರ ಸರ್ಕಾರ ಹಾಗೂ ಭಾರತ ಹವಾಮಾನ ಇಲಾಖೆ ಸಹಯೋಗದೊಂದಿಗೆ ಮೇಘಧೂತ್ ಎಂಬ ಆಪ್ ಅನ್ನು ಬಿಡುಗಡೆಗೊಳಿಸಿದ್ದು, ಇದರ ಸದುಪಯೋಗವಾಗಬೇಕು

ಸುಮಾರ್ ಸುದ್ದಿ

2020-12-26 05:30:00, ajeyanews.com

ಚಿಕ್ಕಮಗಳೂರು, ಡಿ.26

ರೈತರಿಗೆ ಕೃಷಿಯಲ್ಲಿ ಲಾಭಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರವು ನೂತನ ತಂತ್ರಜ್ಞಾನಗಳನ್ನು ಪರಿಚಯಿಸುತ್ತಿದೆ ಎಂದು ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎ.ಟಿ.ಕೃಷ್ಣಮೂರ್ತಿ ಹೇಳಿದ್ದಾರೆ.

ಕೃಷಿ ವಿಜ್ಞಾನ ಕೇಂದ್ರ, ಮೂಡಿಗೆರೆ ವತಿಯಿಂದ ಚೌಧರಿ ಚರಣ್ ಸಿಂಗ್ ಜನ್ಮದಿನದ ಜ್ಞಾಪಕಾರ್ಥವಾಗಿ ರಾಷ್ಟ್ರೀಯ ರೈತ ದಿನಾಚರಣೆಯನ್ನು ಸಖರಾಯಪಟ್ಟಣದ ಕಡೆಕಾಲುವೆಯಲ್ಲಿ, ಕಡೂರಿನ ಪರ್ವತನಹಳ್ಳಿ ಹಾಗೂ ಮೂಡಿಗೆರೆಯ ಬಿಳಗುಳದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸಖರಾಯಪಟ್ಟಣದ ಕಡೆಕಾಲುವೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರವು ರೈತರಿಗೆ ಸಮಗ್ರ ಕೃಷಿ ಪದ್ಧತಿ ಹಾಗೂ ಉಪಕಸುಬುಗಳ ಕುರಿತು ಆನೇಕ ತರಬೇತಿಗಳನ್ನು ನೀಡುತ್ತಿದೆ. ಜಿಲ್ಲೆಯಲ್ಲಿ ಕೃಷಿ ಹಾಗೂ ಕೃಷಿ ಸಂಬಂಧಿತ ಸಮಸ್ಯೆಗಳನ್ನು ಗುರುತಿಸಿ ಅವುಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಬಗೆಹರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.

ರೈತರಿಗೆ ಕೃಷಿಯಲ್ಲಿ ಹವಾಮಾನ ವೈಪರೀತ್ಯದಿಂದ ಆಗುವ ನಷ್ಟವನ್ನು ತಗ್ಗಿಸಲು ಕೇಂದ್ರ ಸರ್ಕಾರ ಹಾಗೂ ಭಾರತ ಹವಾಮಾನ ಇಲಾಖೆ ಸಹಯೋಗದೊಂದಿಗೆ ಮೇಘಧೂತ್ ಎಂಬ ಆಪ್ ಅನ್ನು ಬಿಡುಗಡೆಗೊಳಿಸಿದ್ದು, ಈ ರೀತಿಯ ವೈಜ್ಞಾನಿಕತೆಯನ್ನು ಅಳವಡಿಸಿಕೊಂಡರೆ ಕೃಷಿಯಲ್ಲಿ ಆಗುವ ನಷ್ಟವನ್ನು ತಗ್ಗಿಸಲು ಸಾಧ್ಯವೆಂದು ಸಲಹೆ ನೀಡಿದರು.

ಮೂಡಿಗೆರೆಯ ಬಿಳಗುಳದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರದ ತೋಟಗಾರಿಕಾ ವಿಜ್ಞಾನಿ ಕೆ.ಎಂ.ಕಿರಣ್ ಮಾತನಾಡಿ ರೈತರಿಗೆ ಮಲೆನಾಡಿನಲ್ಲಿ ಭತ್ತದ ಕಟಾವಿನ ನಂತರ ತರಕಾರಿ ಬೆಳೆಗಳನ್ನು ಬೆಳೆಯುವುದರ ಮೂಲಕ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಿದೆ ಎಂದರು.


ಪದಗಂಟು :       
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©