ಶಿವಮೊಗ್ಗ, ಜ.6:
ಗ್ರಾಮಗಳ ಅಭಿವೃದ್ಧಿಯಿಂದಲೇ ದೇಶದ ಅಭಿವೃದ್ಧಿ ಸಾಧ್ಯವಿದೆ. ಅಭಿವೃದ್ಧಿಗೆ ಉತ್ತಮ ರಸ್ತೆಗಳು ಅತ್ಯಗತ್ಯ.
ಈ ನಿಟ್ಟಿನಲ್ಲಿ ರಸ್ತೆಗಳ ಅಭಿವೃದ್ಧಿಗೆ ಮೊದಲ ಪ್ರಾಶಸ್ತ್ಯ ನೀಡಿzನೆ ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಹೇಳಿದರು.
ಮಾರಶೆಟ್ಟಿಹಳ್ಳಿ ಗ್ರಾಮದಲ್ಲಿ ರಿಂದ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 80ಲಕ್ಷ ರೂ. ಮೊತ್ತದಲ್ಲಿ ಗ್ರಾಮ ಪರಿಮಿತಿಯಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಊರಿನ ಹಿರಿಯರು, ಮುಖಂಡರು, ಮಹಿಳೆಯರು ಜೊತೆಗೂಡಿ ಭೂಮಿ ಪೂಜೆ ನೆರವೇರಿಸಿದರು.
ಮಂಡಲ ಅಧ್ಯಕ್ಷರಾದ ಮಂಜುನಾಥ್, ಎಪಿಎಂಸಿ ಸದಸ್ಯ ಎಸ್. ಶ್ರೀನಿವಾಸ್, ಮಂಡಲ ಪ್ರಧಾನ ಕಾರ್ಯದರ್ಶಿ ಉಜ್ಜನಪ್ಪ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರುದ್ರೋಜಿ ರಾವ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Designed, Developed and Maintained by PRABHAT SERVICES ™  , AJEYA KANNADA DAILY 2019 ©