Saturday 16 January 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಕಾಡಾದಿಂದ ರೈತರಿಗೆ ಸೌಲಭ್ಯ: ಪವಿತ್ರಾ ರಾಮಯ್ಯ

ಕಾಡಾ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗಾಗಿ 400 ಕೋಟಿ ರೂ. ಪ್ರಸ್ತಾವನೆ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದ್ದು, ಅವರು ಮನವಿ ಪರಿಶೀಲಿಸಿ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

2021-01-11 05:30:00, ajeyanews.com

Ajeya Imageಶಿವಮೊಗ್ಗ, ಜ.11: 
ಕಾಡಾದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ರೈತರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತುಂಗಾ-ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಹೇಳಿದರು.

ಇಂದು ಪತ್ರಿಕಾ ಭವನದಲ್ಲಿ ಪ್ರೆಸ್ ಟ್ರಸ್ಟ್ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಕಾಡಾ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗಾಗಿ 400 ಕೋಟಿ ರೂ. ಪ್ರಸ್ತಾವನೆ ಮುಖ್ಯಮಂತ್ರಿಗಳಿಗೆ  ಸಲ್ಲಿಸಲಾಗಿದ್ದು,  ಅವರು  ಮನವಿ ಪರಿಶೀಲಿಸಿ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಆದರೆ ಕೋವಿಡ್‌ನಿಂದಾಗಿ ಹಣಕಾಸಿನ ಅಡಚಣೆ ಇದೆ ಎಂಬುದು ಗೊತ್ತಿದೆ. ಸೌಲಭ್ಯಕ್ಕಾಗಿ ಹೋರಾಟ ಮಾಡುತ್ತಲೇ ಬರಲಾಗಿದೆ. ಈಗ ಅನುದಾನಕ್ಕೂ ಹೋರಾಟ ಮಾಡುವ ಸ್ಥಿತಿ ಬಂದಿದೆ. ನಾಲೆಗಳಲ್ಲಿ ನೀರು ಪೋಲಾಗದಂತೆ ಡ್ರಿಪ್ ಮೂಲಕ ನೀರು ಹರಿಸಲು ಯೋಜನೆ ರೂಪಿಸಲಾಗಿದೆ. ಗೊಂದಿ ನಾಲೆಯ ಬಳಿ ಪ್ರವಾಸೋದ್ಯಮ ಮಾಡಲು ಉದ್ದೇಶಿಸಲಾಗಿದೆ. ಸರ್ಕಾರದಿಂದ ಸಿಗುವ ಅನುದಾನ ದುರ್ಬಳಕೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ವಿವಿಧ ಅಭಿವೃದ್ಧಿ ಕಾರ್ಯಗಳಿಗೆ 40 ಕೋಟಿ ಕೆಲಸಕ್ಕೆ ರೈತರಿಂದ ಅರ್ಜಿಗಳು ಬಂದಿವೆ. ಆದರೆ ಹಣಕಾಸಿನ ಕೊರತೆ ಇದೆ. ಇದನ್ನು ಸರಿದೂಗಿಸುವ ಸಲುವಾಗಿ ಜಿಪಂ ಸಿಇಓ ಅವರಿಗೆ ಮನವಿ ಮಾಡಲಾಗಿದ್ದು, ಕಾಡಾ ವ್ಯಾಪ್ತಿಯ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಎನ್‌ ಆರ್‌ ಇ ಜಿಯಲ್ಲಿ ಕೆಲಸ ಮಾಡಲು 15-20ಲಕ್ಷ ರೂ. ಬಿಡುಗಡೆ ಮಾಡಿದ್ದಾರೆ. ಇದರಿಂದ ಒಂದಿಷ್ಟು ಕೆಲಸ ಮಾಡಲು ಸಾಧ್ಯವಾಗಿದೆ . ಕಾಡಾ ಇರುವುದು ರೈತರಿಗೆ ಸೌಲಭ್ಯ ನೀಡಲು. ಯಾವುದೇ ರೈತರು ಸೌಲಭ್ಯ ಕೇಳಿದರೂ ಪ್ರಾಮಾಣಿಕವಾಗಿ ಅದನ್ನು ಕೊಡಲು ಕ್ರಮಕೈಗೊಳ್ಳಲಾಗುತ್ತದೆ. ಭದ್ರಾ  ನಾಲೆ ಆಧುನೀಕರಣ ಕೂಡ ಸಮರ್ಪಕವಾಗಿಲ್ಲ. ಇದರಿಂದ ರೈತರಿಗೆ ಅನುಕೂಲವಾಗುತ್ತಿಲ್ಲ ಎಂದರು.

ಪ್ರೆಸ್ ಟ್ರಸ್ಟ್ ಅಧ್ಯಕ್ಷ  ಎನ್. ಮಂಜುನಾಥ, ಪ್ರಧಾನ ಕಾರ್ಯದರ್ಶಿ ನಾಗರಾಜ್ ನೇರಿಗೆ ಇದ್ದರು.

ಪದಗಂಟು :       
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©