ಹೊಳೆಹೊನ್ನೂರು, ಜ.13:
ಭವ್ಯ ಭಾರತದ ಕನಸನ್ನು ಕಂಡಿದ್ದ ಸ್ವಾಮಿ ವಿವೇಕಾನಂದರು ಶಿಕ್ಷಣ ಮಾತು ಯುವಕರ ಬಗ್ಗೆ ತಮ್ಮದೇ ಆದ ವಿಶಿಷ್ಟ ನಿಲುವನ್ನು ಹೊಂದಿದ್ದರು ಎಂದು ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ ಹೇಳಿದರು.
ಮಂಡಲದ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಶ್ರೀಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಲಾಯಿತು.
ಸದಾ ಸಕಾರಾತ್ಮಕ ಚಿಂತನೆಗಳಿಂದ ಯುವಕರನ್ನು ಪ್ರೇರೇಪಿಸುತ್ತಿದ್ದ ಅವರು ಹೋದಲೆಲ್ಲಾ ಶಿಕ್ಷಣದ ಬಗ್ಗೆ ಹೇಳುತ್ತಿದ್ದರು. ದೈಹಿಕ ಶಿಕ್ಷಣ, ಮಾನಸಿಕ ಶಿಕ್ಷಣ, ಧಾರ್ಮಿಕ ಶಿಕ್ಷಣ, ಮಹಿಳಾ ಶಿಕ್ಷಣ, ಮೌಲ್ಯಾಧಾರಿತ ಶಿಕ್ಷಣದ ಬಗ್ಗೆ ಅವರು ಮಾತನಾಡುತ್ತಿದ್ದರು. ಸ್ವಾಮಿ ವಿವೇಕಾನಂದರೇ ಹೇಳುವಂತೆ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ, ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವುದೇ ಶಿಕ್ಷಣ. ಮನುಷ್ಯನ ವ್ಯಕ್ತಿತ್ವ ಶಿಕ್ಷಣದಿಂದ ಬಯಲಿಗೆ ಬರುತ್ತದೆ ಎಂದು ಹೇಳುತ್ತಿದ್ದ ವಿವೇಕಾನಂದರು ಭಾರತದ ಎಲ್ಲ ಸಮಸ್ಯೆಗಳಿಗೂ ಶಿಕ್ಷಣ ಒಂದೇ ಪರಿಹಾರ ಎಂದು ನಂಬಿದ್ದರು.
ಮಂಡಲ ಅಧ್ಯಕ್ಷ ಮಂಜುನಾಥ್, ಎಪಿಎಂಸಿ ಸದಸ್ಯ ಎಸ್. ಶ್ರೀನಿವಾಸ್,ಉಪಾಧ್ಯಕ್ಷ ಸುಬ್ರಮಣಿ, ಯುವ ಮೋರ್ಚಾ ಅಧ್ಯಕ್ಷ ನಿರಂಜನ್ ಪಾಟೀಲ್, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ನಂಜುಂಡಸ್ವಾಮಿ, ವೈದ್ಯಾಧಿಕಾರಿ ಡಾ.ದೇವಾನಂದ್ ಹಾಗೂ ಯುವ ಮೋರ್ಚಾ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.
Designed, Developed and Maintained by PRABHAT SERVICES ™  , AJEYA KANNADA DAILY 2019 ©