Sunday 07 March 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಆಹಾರ ಸಚಿವರ ವಿರುದ್ಧ ಪ್ರತಿಭಟನೆ

2021-02-18 05:30:00, ajeyanews.com

Ajeya Image
ಮೊಗ್ಗ, ಫೆ.18 :
ಪೆಟ್ರೊಲ್, ಡಿಸೇಲ್, ಅಡುಗೆ ಅನಿಲ ಮತ್ತು ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದನ್ನು ಖಂಡಿಸಿ, ಬಿಪಿಎಲ್ ಕಾರ್ಡ್ ಮಾನದಂಡದ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರ ಹೇಳಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಜಯಕರ್ನಾಟಕ ಸಂಘಟನೆಯ ಜಿಲ್ಲಾ ಮಹಿಳಾ ಘಟಕದಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. 

ಟಿವಿ, ಗ್ಯಾಸ್, ದ್ವಿಚಕ್ರ ವಾಹನ ಇದ್ದವರಿಗೆ ಮಾತ್ರ ಬಿಪಿಎಲ್ ಕಾರ್ಡ್ ಎಂದು ಆಹಾರ ಸಚಿವರು ಹೇಳಿಕೆ ನೀಡಿದ್ದು, ಇದರಿಂದ ಕೋಟ್ಯಂತರ ಜನರ ಆತಂಕಕ್ಕೆ ಈಡಾಗಿದ್ದಾರೆ. ಸಚಿವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯಿಂದಾಗಿ ಜನ ಸಾಮಾನ್ಯ ತತ್ತರಿಸುತ್ತಿದ್ದು, ಕರೋನಾ ಬೀತೀಯ ನಡುವೆ ವರ್ಷಗಳಿಂದ ಉದ್ಯೋಗ ಇಲ್ಲದೆ ಪರದಾಡುತ್ತಿರುವಾಗ ಮತ್ತು ನಿರುದ್ಯೋಗಿ ಯುವಕರ ಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಕೂಡಲೇ ಸರ್ಕಾರ ತೈಲ ಬೆಲೆ ಮತ್ತು ಅಡುಗೆ ಅನಿಲ ಹಾಗೂ ದಿನ ಬಳಕೆ ವಸ್ತುಗಳ ಬೆಲೆಯನ್ನು ನಿಯಂತ್ರಿಸಬೇಕು. ಮತ್ತು ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಬೇಕೆಂದು ಆಗ್ರಹಿಸಲಾಯಿತು.

ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ನಾಜೀಮಾ, ಪ್ರಧಾನ ಕಾರ್ಯದರ್ಶಿ ಪ್ರೇಮಾ, ಪಂಕಜ, ಪವಿತ್ರಾ ಎಂ. ಜೈನ್, ನೂತನ್ ಮೂಲ್ಯ, ಸುಮ, ಅನಿಲ್ ಕುಮಾರ್ ಮೊದಲಾದವರು ಇದ್ದರು.

ಪದಗಂಟು :      
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©