ಶಿವಮೊಗ್ಗ , ಮಾರ್ಚ್ 3:
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಅಧ್ಯಕ್ಷತೆಯಲ್ಲಿ ಮಾರ್ಚ್ 4ರಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಭವನ ಜಿಲ್ಲೆಯ ಕಾಂಗ್ರೆಸ್ ಪ್ರಮುಖರ ಸಭೆಯನ್ನು ಕರೆಯಲಾಗಿದೆ. ತಾವೂ ಈ ಸಭೆಗೆ ಹಾಜರಾಗಬೇಕೆಂದು ಕೋರಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸೂಚನೆಯಂತೆ ಈ ಸಭೆಯನ್ನು ಆಯೋಜಿಸಲಾಗಿದ್ದು. ಪಕ್ಷದ ಸಂಘಟನೆಯ ದೃಷ್ಟಿಯಿಂದ ಈ ಸಭೆ ಅತ್ಯಂತ ಮಹತ್ವ ಹೊಂದಿದ್ದು, ಸಭೆಯ ಆಹ್ವಾನಿತರು ತಪ್ಪದೇ ಭಾಗವಹಿಸುವುದು ಅಗತ್ಯವಾಗಿದೆ ಎಂದು ವಿನಂತಿಸಲಾಗಿದೆ. ಈ ಸಭೆಗೆ ಮಾಜಿ ಸಚಿವರು, ವಿಧಾನ ಪರಿಷತ್ ಸದಸ್ಯರು, ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಮಾಜಿ ಸದಸ್ಯರು, ಸಂಸತ್/ವಿಧಾನಸಭೆ/ವಿಧಾನಪರಿಷತ್ಗೆ ನಿಕಟ ಪೂರ್ವ ಚುನಾವಣೆಯಲ್ಲಿ ಸ್ಪರ್ದಿಸಿದ್ದ ಅಭ್ಯರ್ಥಿಗಳು, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರು ಮತ್ತು ಸದಸ್ಯರು, ವಿಧಾನಸಭಾ ಕ್ಷೇತ್ರ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನೇಮಕವಾಗಿರುವ ವೀಕ್ಷಕರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಟೌನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನು ಈ ಸಭೆಗೆ ಆಹ್ವಾನಿಸಲಾಗಿದೆ.
Image Courtesy : Internet
ಶಿಕಾರಿಪುರ: 30ಲೀಟರ್
Designed, Developed and Maintained by PRABHAT SERVICES ™  , AJEYA KANNADA DAILY 2019 ©