Tuesday 28 September 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಬಿಜೆಪಿ ಸರ್ಕಾರದ ಸಾಧನೆಗಳೇನು: ಹೆಚ್‌ಡಿಕೆ

2021-04-15 05:30:00, ajeyanews.com

Ajeya Image
ಬೀದರ್,ಏ.15:
 
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯವರು ನಾವು ಅಧಿಕಾರಕ್ಕೆ ಬಂದರೆ ರೈತರ ಬೆಳೆಗಳಿಗೆ ದುಪ್ಪಟ್ಟು ಬೆಲೆ ಕೊಡುತ್ತೇವೆ ಅಂತ ಹೇಳಿದ್ದರು. ಆದರೆ  ಅವರು ದುಪ್ಪಟ್ಟು ಬೆಲೆಯ ಬದಲಿಗೆ ದುಪ್ಪಟ್ಟು ಖರ್ಚು ಮಾಡಿದ್ದಾರೆಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಡಬಿ ವಾಡಿ ಸೇರಿದಂತೆ ವಿವಿಧೆಡೆ ನಡೆದ ಬಹಿರಂಗ ಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿರವರ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಬಿಜೆಪಿಯವರು ರೈತರ ಪರ ಯೋಜನೆಗಳನ್ನು ಜಾರಿಗೆ ತರ್ತಿವಿ ಅಂತ ಹೇಳಿ ರೈತ ವಿರೋಧಿ ನೀತಿಗಳನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಡಿಸೇಲ್, ಪೆಟ್ರೋಲ್, ಸಿಲಿಂಡರ್ ಬೆಲೆಯನ್ನು ಸಹ ಹೆಚ್ಚಳ ಮಾಡ್ತಿದ್ದಾರೆ. ಇದರಿಂದ ದೇಶದಲ್ಲಿರುವ ಬಡಜನರ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದಿದ್ದಾರೆ.

ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ಬೋಜೆಗೌಡ, ರಮೇಶಗೌಡ, ಮುಖಂಡರಾದ ತಿಮ್ಮಯ್ಯ ಪುರ್ಲೆ, ನಾಸಿರ್ ಹುಸೇನ್, ಕೃಷ್ಣಾ ರೆಡ್ಡಿ ಸೇರಿದಂತೆ ಅನೇಕರಿದ್ದರು.

ಪದಗಂಟು :         
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©