Friday 14 May 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಕೋವಿಡ್ ಸಮರ್ಪಕ ನಿರ್ವಹಣೆಗೆ ಕ್ರಮಕ್ಕೆ ಕಾಂಗ್ರೆಸ್ ಒತ್ತಾಯ

ಪಾಲಿಕೆ ವ್ಯಾಪ್ತಿಯಲ್ಲಿ ದಿನೇ ದಿನೇ ಸೋಂಕಿನ ಹಾಗೂ ಮರಣ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಇದನ್ನು ಸಮರ್ಥವಾಗಿ ತಡೆಗಟ್ಟಲು ಪಾಲಿಕೆ ವತಿಯಿಂದ ಕೆಲವು ಅಗತ್ಯ ಕ್ರಮಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

2021-04-28 05:30:00, ajeyanews.com

Ajeya Imageಶಿವಮೊಗ್ಗ,ಏ. 28:
ನಗರದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚಾಗಿರುವುದರಿಂದ ಅದರ ಸಮರ್ಪಕ ನಿರ್ವಹಣೆಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರು ಇಂದು ಆಯುಕ್ತರಿಗೆ ಮನವಿ ಸಲ್ಲಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ದಿನೇ ದಿನೇ ಸೋಂಕಿನ ಹಾಗೂ ಮರಣ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಇದನ್ನು ಸಮರ್ಥವಾಗಿ ತಡೆಗಟ್ಟಲು ಪಾಲಿಕೆ ವತಿಯಿಂದ ಕೆಲವು ಅಗತ್ಯ ಕ್ರಮಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಕೊರೋನಾ ಸೋಂಕು ಪತ್ತೆಯಾದ ಸೋಂಕಿತರ ವಸತಿ ಗೃಹಗಳಿಗೆ ಸಮರ್ಪಕವಾಗಿ ಔಷಧಿ ಸಿಂಪಡಣೆ, ಸ್ಯಾನಿಟೈಸ್ ಮಾಡಬೇಕು. ಅಲ್ಲಿ ನಾಗರಿಕರ ಸಂಪರ್ಕವನ್ನು ನಿರ್ಬಂಧಿಸುವುದು, ಕೊರೋನಾ ಸೋಂಕಿತರ ಪ್ರಾಥಮಿಕ ಸಂಪರ್ಕವನ್ನು ಹೊಂದಿರುವ ವ್ಯಕ್ತಿಗಳ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸುವುದು. ಫಲಿತಾಂಶ ಬರುವವರೆಗೆ ಹೋಮ್ ಐಸೋಲೇಷನ್ ಕಡ್ಡಾಯಗೊಳಿಸುವುದು. ಕೊರೋನಾ ಸೋಂಕಿತರ ಸಂಚಾರವನ್ನು ಕಡ್ಡಾಯವಾಗಿ ನಿರ್ಬಂಧಿಸಬೇಕು ಎಂದು ಒತ್ತಾಯಿಸಲಾಗಿದೆ.

ಪಾಲಿಕೆ ಕಂದಾಯ ಇಲಾಖೆ ಸರ್ಕಾರಿ ಕಚೇರಿಗಳಿಗೆ ಪ್ರತಿದಿನ ಸ್ಯಾನಿಟೈಸ್ ಮಾಡಬೇಕು. ಶಿವಮೊಗ್ಗ ನಗರ ವ್ಯಾಪ್ತಿಯ ಎಲ್ಲಾ ಆರೋಗ್ಯ ಕೇಂದ್ರಗಳಿಗೆ ಮಹಾನಗರ ಪಾಲಿಕೆ ವತಿಯಿಂದ ವಾಹನ ವ್ಯವಸ್ಥೆ ಮಾಡಬೇಕು. ಪಾಲಿಕೆ ಅಧಿಕಾರಿಗಳ ಹಾಗೂ ಸ್ವಚ್ಛತಾ ಸಿಬ್ಬಂದಿಗಳ ಆರೋಗ್ಯ ತಪಾಸಣೆ ಮಾಡಬೇಕು. ಪಾರ್ಕ್‌ಗಳಲ್ಲಿ ಜನರ ಓಡಾಟಕ್ಕೆ ನಿಯಂತ್ರಣ ಹೇರಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪಾಲಿಕೆ ಕಾಂಗ್ರೆಸ್ ಸದಸ್ಯರಾದ ಮೆಹಖ್ ಷರೀಫ್, ಮಂಜುಳಾ ಶಿವಣ್ಣ, ರಮೇಶ್ ಹೆಗ್ಡೆ, ಆರ್.ಸಿ. ನಾಯ್ಕ್ ಮೊದಲಾದವರಿದ್ದರು.

ಪದಗಂಟು :        
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©