Friday 14 May 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಜನತಾ ಕರ್ಫ್ಯೂ: ಶಿವಮೊಗ್ಗ ನಗರದಲ್ಲಿ ಬಿಗಿಕ್ರಮ

ಕಟ್ಟಡ ಸಾಮಗ್ರಿಗಳ ವ್ಯಾಪಾರಸ್ದರಿಂದ ದೂರು ಕೂಡ ಬಂದಿದ್ದು, ಸರ್ಕಾರದ ಮಾರ್ಗಸೂಚಿಯನ್ನು ಪೊಲೀಸರು ಮತ್ತು ಅಧಿಕಾರಿಗಳು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಕಟ್ಟಡ ಕಾಮಗಾರಿ, ಕೃಷಿ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ ಎಂದು ಸರ್ಕಾರ ಹೇಳಿದೆ.

2021-04-28 05:30:00, ajeyanews.com

Ajeya Imageಶಿವಮೊಗ್ಗ,ಏ.28:
ಇಂದಿನಿಂದಲೇ ಎರಡನೇ ಹಂತದ ಲಾಕ್‌ಡೌನ್ ಮುಂದುವರೆದಿದ್ದು, ನಗರದಲ್ಲಿ ಪೊಲೀಸರು ಮತ್ತು ಅಧಿಕಾರಿಗಳು 10 ಗಂಟೆಯ ನಂತರ ಬಿಗಿ ಕ್ರಮ ಕೈಗೊಂಡರು.

10 ಗಂಟೆ ನಂತರವೂ ವ್ಯವಹಾರದಲ್ಲಿ ತೊಡಗಿದ್ದ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಿಸಲಾಗಿದೆ. ರಸ್ತೆಯಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದವರಿಗೆ ಎಚ್ಚರಿಕೆ ನೀಡಿದರು. ಅನೇಕ ವೃತ್ತ, ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದ್ದು, ದ್ವಿಚಕ್ರವಾಹನದಲ್ಲಿ ಅನಗತ್ಯವಾಗಿ ತಿರುಗಾಡುತ್ತಿದ್ದವರಿಗೆ ದಂಡ ಹಾಕಲಾಯಿತು. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರು ನಗರದೆಲ್ಲೆಡೆ ಸಂಚರಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. 

Ajeya Imageಈ ಮಧ್ಯೆ ಕಟ್ಟಡ ಸಾಮಗ್ರಿಗಳ ವ್ಯಾಪಾರಸ್ದರಿಂದ ದೂರು ಕೂಡ ಬಂದಿದ್ದು, ಸರ್ಕಾರದ ಮಾರ್ಗಸೂಚಿಯನ್ನು ಪೊಲೀಸರು ಮತ್ತು ಅಧಿಕಾರಿಗಳು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಕಟ್ಟಡ ಕಾಮಗಾರಿ, ಕೃಷಿ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ, ಕಟ್ಟಡ ನಿರ್ಮಾಣ ಕಾಮಗಾರಿಗೆ ಬಳಸುವ ಕಬ್ಬಿಣ, ಸಿಮೆಂಟ್ ಅಗತ್ಯವಾಗಿದೆ. ಆ ಅಂಗಡಿಗಳನ್ನು ಬಂದ್ ಮಾಡಲು ತಿಳಿಸಲಾಗಿದೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿರುವ ಅವರು, ಸರ್ಕಾರ ತಕ್ಷಣವೇ ಸ್ಪಷ್ಟವಾಗಿ ಮಾರ್ಗಸೂಚಿ ಬಗ್ಗೆ ತಿಳಿಸಬೇಕು. ಕಟ್ಟಡ ಸಾಮಗ್ರಿಗಳ ಮಾರಾಟಕ್ಕೆ ಅವಕಾಶ ಮಾಡಿಕೊಡಬೇಕೆಂದು ವ್ಯಾಪಾರಸ್ಥರು ಆಗ್ರಹಿಸಿದ್ದಾರೆ. 

ಹಾಗೆಯೇ ಹೋಟೆಲ್ ಮಾಲೀಕರರು ಕೂಡ ಬಲವಂತವಾಗಿ ಪೊಲೀಸರು ಬಾಗಿಲು ಹಾಕಿಸುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿಯಂತೆ ಪಾರ್ಸೆಲ್ ನೀಡಲು ಅವಕಾಶವಿದೆ. ಆದರೂ ಕೂಡ ಬಾಗಿಲು ಹಾಕಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪದಗಂಟು :      
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©