Friday 14 May 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ರದ್ದುಮಾಡಿ: ಎನ್‌ ಎಸ್‌ ಯು ಐ

ಈಗಾಗಲೇ ಕೆಲವು ಪ್ರತಿಷ್ಠಿತ ಕಾಲೇಜ್‌ಗಳಲ್ಲಿ ಪ್ರಥಮ ಪಿಯುಸಿ ತರಗತಿಗಳಿಗೆ ದಾಖಲಾತಿ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಹೀಗಾದರೆ ನಮ್ಮ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ತರಗತಿಗಳು ನಡೆದಿಲ್ಲ.

2021-04-30 05:30:00, ajeyanews.com

Ajeya Imageಶಿವಮೊಗ್ಗ, ಏ.30:
ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಯೋಚನೆಯನ್ನು ರಾಜ್ಯ ಸರ್ಕಾರ ಕೈಬಿಡಬೇಕೆಂದು ಆಗ್ರಹಿಸಿ ಇಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ  ಮನವಿಯಲ್ಲಿ ಎನ್‌ಎಸ್‌ಯುಐ ಜಿಲ್ಲಾ ಘಟಕ ಆಗ್ರಹಿಸಿದೆ.  

ಈಗಾಗಲೇ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯಕ್ರಮದಲ್ಲಿ ವ್ಯಾಸಾಂಗ ಮಾಡುತ್ತಿರುವ 10ನೇ ತರಗತಿ ಮಕ್ಕಳನ್ನು ಪರೀಕ್ಷೆ ಇಲ್ಲದೇ ತೇರ್ಗಡೆಗೊಳಿಸಲಾಗಿದೆ. ಆದರೆ, ರಾಜ್ಯ ಪಠ್ಯಕ್ರಮದಲ್ಲಿ ಎಸ್‌ ಎಸ್‌ ಎಲ್‌ ಸಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಗೊಂದಲಕ್ಕೆ ಒಳಗಾಗಿದ್ದಾರೆ. ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಅವರು ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದಾರೆ. ಕೊರೋನಾ ಸೋಂಕು ಮರಣ ಮೃದಂಗ ಬಾರಿಸುತ್ತಿರುವ ಈ ಸಂದರ್ಭದಲ್ಲಿ ಪರೀಕ್ಷೆ ನಡೆಸಲು ಸಾಧ್ಯವಿದೆಯೇ, ಮಕ್ಕಳ ಜೀವಕ್ಕಿಂತ ಪರೀಕ್ಷೆ ಹೆಚ್ಚಾಗಿದೆಯೇ ಎಂದು ಮನವಿಯಲ್ಲಿ ಪ್ರಶ್ನಿಸಲಾಗಿದೆ.

ಈಗಾಗಲೇ ಕೆಲವು ಪ್ರತಿಷ್ಠಿತ ಕಾಲೇಜ್‌ಗಳಲ್ಲಿ ಪ್ರಥಮ ಪಿಯುಸಿ ತರಗತಿಗಳಿಗೆ ದಾಖಲಾತಿ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಹೀಗಾದರೆ ನಮ್ಮ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ತರಗತಿಗಳು ನಡೆದಿಲ್ಲ. ಆನ್‌ಲೈನ್ ತರಗತಿ ನಡೆದಿದ್ದರೂ ಅದು ಪ್ರಯೋಜನಕ್ಕೆ ಬಂದಿಲ್ಲ. ಗ್ರಾಮೀಣ ಪ್ರದೇಶದ ಮಕ್ಕಳು ಆನ್‌ಲೈನ್ ತರಗತಿ ಕೇಳಲು ಆಗಿಲ್ಲ. ಇವೆಲ್ಲ ಕಾರಣದಿಂದ ರಾಜ್ಯ ಪಠ್ಯಕ್ರಮದಲ್ಲಿ ಅಭ್ಯಾಸ ಮಾಡುತ್ತಿರುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನು ಸಹ ಪರೀಕ್ಷೆ ಇಲ್ಲದೇ ತೇರ್ಗಡೆಗೊಳಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರಮುಖರಾದ ಕೆ. ಚೇತನ್, ಹೆಚ್.ಎಸ್. ಬಾಲಾಜಿ, ರವಿ, ವಿಜಯ್, ವಿನಯ್ ತಾಂಡ್ಲೆ, ಗಿರೀಶ್, ಅಬ್ದುಲ್ ಸತ್ತಾರ್ ಸೇರಿದಂತೆ ಹಲವರಿದ್ದರು. 


ಪದಗಂಟು :          
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©