Friday 14 May 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ತೀರ್ಥಹಳ್ಳಿಯಲ್ಲಿ ಅಚ್ಚರಿಯ ಸೋಲು: ಈಶ್ವರಪ್ಪ

ಭದ್ರಾವತಿಯಲ್ಲಿ ಕಳೆದ ಬಾರಿ 2 ಸ್ಥಾನ ಗೆದ್ದಿದ್ದೆವು. ಈ ಬಾರಿ 4 ಸ್ಥಾನ ಗೆದ್ದಿದ್ದೇವೆ. ಹಲವು ಕಡೆ ಸಣ್ಣ ಅಂತರದಲ್ಲಿ ನಮ್ಮ ಅಭ್ಯರ್ಥಿಗಳು ಸೋತಿದ್ದಾರೆ. ಈ ಬಾರಿ ಭದ್ರಾವತಿಯಲ್ಲಿ ಎಲ್ಲಾ ಸ್ಥಾನಗಳಲ್ಲೂ ಬಿಜೆಪಿ ಸ್ಪರ್ಧೆ ಮಾಡಿದ್ದು ವಿಶೇಷ.

2021-04-30 05:30:00, ajeyanews.com

Ajeya Imageಶಿವಮೊಗ್ಗ,ಏ.30:
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಸೋಲು ಆಶ್ಚರ್ಯ ತಂದಿದೆ. ಏಕೆ ಹೀಗಾಗಿದೆ ಗೊತ್ತಿಲ್ಲ. ಈ ಬಗ್ಗೆ ಸ್ಥಳೀಯ ಶಾಸಕರು ಮತ್ತು ಬಿಜೆಪಿ ಜಿಲ್ಲಾ ಸಮಿತಿಯವರು ಸೋಲಿಗೆ ಕಾರಣ ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತಾರೆ ಎಂದು ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ಕಳೆದ ಬಾರಿ 2 ಸ್ಥಾನ ಗೆದ್ದಿದ್ದೆವು. ಈ ಬಾರಿ 4 ಸ್ಥಾನ ಗೆದ್ದಿದ್ದೇವೆ. ಹಲವು ಕಡೆ ಸಣ್ಣ ಅಂತರದಲ್ಲಿ ನಮ್ಮ ಅಭ್ಯರ್ಥಿಗಳು ಸೋತಿದ್ದಾರೆ. ಈ ಬಾರಿ ಭದ್ರಾವತಿಯಲ್ಲಿ ಎಲ್ಲಾ ಸ್ಥಾನಗಳಲ್ಲೂ ಬಿಜೆಪಿ ಸ್ಪರ್ಧೆ ಮಾಡಿದ್ದು ವಿಶೇಷ. ಆದರೂ ಪ್ರಯತ್ನ ನಿರೀಕ್ಷೆಯಷ್ಟು ಸಫಲವಾಗಿಲ್ಲ. ತೀರ್ಥಹಳ್ಳಿಯಲ್ಲಿ ನಮ್ಮ ಹಿನ್ನಡೆಗೆ ಕಾರಣ ಏನು ಎಂಬುದರ ಬಗ್ಗೆ ಪಕ್ಷದ ಎಲ್ಲಾ ಹಿರಿಯರು ಕುಳಿತು ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ಬಿಜೆಪಿಯ ಗೆಲುವಿಗೆ ಪ್ರಯತ್ನಿಸುತ್ತೇವೆ ಎಂದರು. 

ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಬಗ್ಗೆ ಸಾಕಷ್ಟು ಅಭಿವೃದ್ಧಿ ಕಾರ್ಯ ಚೆನ್ನಾಗಿ ಆಗಿದೆ. ಆದರೂ ಅನೇಕ ಕೊರತೆಗಳಿದ್ದು, ಅಧಿಕಾರಿಗಳೊಂದಿಗೆ ಕೂಲಂಕಷವಾಗಿ ಚರ್ಚಿಸಿದ್ದೇನೆ. ಎಲ್ಲಾ ಕೊರತೆ ಗಮನಕ್ಕೆ ತಂದಿದ್ದಾರೆ ಅದರ ಬಗ್ಗೆ ಕ್ರಮಕೈಗೊಳ್ಳುವಂತೆ ಸಿಇಒ ಮತ್ತು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಕೋವಿಡ್ ಸಂದರ್ಭದಲ್ಲಿ ಸಹಕರಿಸದ ವೈದ್ಯರು ಮತ್ತು ಸಿಬ್ಬಂದಿಗಳ ಬಗ್ಗೆ ಕಠಿಣ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಜನರು ಚೆನ್ನಾಗಿರಬೇಕು ಎಂಬ ದೃಷ್ಟಿಯಿಂದ ಕರ್ಫ್ಯೂ ಜಾರಿಗೆ ತಂದಿದ್ದು, ಅನೇಕ ಜನರು ಇನ್ನೂ ಕೂಡ ನಿರ್ಲಕ್ಷ್ಯ ತಳೆದಿದ್ದು ಗುಂಪಾಗಿ ಸೇರುವುದು. ದ್ವಿಚಕ್ರ ವಾಹನಗಳಲ್ಲಿ ಬೇಕಾಬಿಟ್ಟಿ ಓಡಾಡುವುದು ಮಾಮೂಲಿಯಾಗಿದ್ದು, ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ ಎಂದರು. 

ಶಾಸಕ ಆಯನೂರು ಮಂಜುನಾಥ್, ಮೇಯರ್ ಸುನಿತಾ ಅಣ್ಣಪ್ಪ ಉಪಸ್ಥಿತರಿದ್ದರು.


ಪದಗಂಟು :        
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©