Friday 14 May 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ: ಈಶ್ವರಪ್ಪ

18 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಯಾವುದೇ ಅಳುಕಿಲ್ಲದೆ ಚುಚ್ಚುಮದ್ದನ್ನು ಹಾಕಿಸಿಕೊಳ್ಳಿ. ಇದರಿಂದ ಸೋಂಕು ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ. ಸೋಂಕಿನ 2ನೇ ಅಲೆಯು ಒಂದಷ್ಟು ಪರಿಣಾಮಕಾರಿ ವ್ಯವಸ್ಥೆಯಲ್ಲಿ ಹರಡುತ್ತಿದೆ.

2021-05-01 05:30:00, ajeyanews.com

Ajeya Imageಭದ್ರಾವತಿ, ಮೇ 1:
ಈಗಾಗಲೇ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತೆ ತೆಗೆದುಕೊಂಡಿದ್ದು, ಸೋಂಕಿನ ನಿಯಂತ್ರಣದಲ್ಲಿ ಜನಗಳಿಗೆ ಈಗಾಗಲೇ ಚುಚ್ಚುಮದ್ದು ಹಾಕಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಇಲ್ಲಿನ ಬಸವೇಶ್ವರ ಸಭಾ ಭವನದಲ್ಲಿ ತಾಲ್ಲೂಕು ಮಟ್ಟದ ಕೊರೋನಾ ನಿಯಂತ್ರಣ ನಿರ್ವಹಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಬಾರಿಗಿಂತ ಈ ಬಾರಿ ಕೊರೋನಾ ಸೋಂಕಿನ 2ನೇ ಅಲೆ ಹೆಚ್ಚಾಗಿದೆ. ಸೋಂಕನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸರ್ಕಾರ ಜಾರಿಗೊಳಿಸಿರುವ ನಿಯಮಗಳನ್ನು ಜನತೆ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

18 ವರ್ಷ ಮೇಲ್ಪಟ್ಟ ವ್ಯಕ್ತಿಗಳು ಯಾವುದೇ ಅಳುಕಿಲ್ಲದೆ ಚುಚ್ಚುಮದ್ದನ್ನು ಹಾಕಿಸಿಕೊಳ್ಳಿ. ಇದರಿಂದ ಸೋಂಕು ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ. ಸೋಂಕಿನ 2ನೇ ಅಲೆಯು ಒಂದಷ್ಟು ಪರಿಣಾಮಕಾರಿ ವ್ಯವಸ್ಥೆಯಲ್ಲಿ ಹರಡುತ್ತಿದೆ. ಜನರು ಮುಂಜಾಗ್ರತಾ ಕ್ರಮವಾಗಿ ದೈಹಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು, ಆಗಿಂದಾಗ್ಗೆ ಸ್ಯಾನಿಟೈಸರ್ ಬಳಸುವ ಮೂಲಕ ಹತೋಟಿಗೆ ತರಬಹುದು ಎಂದರು. 

ಪ್ರತಿ ವ್ಯಕ್ತಿಯ ಜೀವ ಅತೀ ಮುಖ್ಯವಾಗಿದ್ದು, ತಮ್ಮನ್ನು ತಾವು ಕೊರೋನಾದಿಂದ ರಕ್ಷಿಸಿಕೊಳ್ಳುವುದರ ಜೊತೆಗೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಬೇಕಾಗಿದೆ ಎಂದರು.

ಎಂಎಲ್‌ಸಿ ರುದ್ರೇಗೌಡ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ ಅಶೋಕ ನಾಯ್ಕ, ಭದ್ರಾವತಿಯ ಶಾಸಕ ಬಿ.ಕೆ. ಸಂಗಮೇಶ್ವರ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಪಂ ಸಿಇಒ ಎಂ.ಎಲ್.ವೈಶಾಲಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


ಪದಗಂಟು :        
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©