Friday 14 May 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಸುಮಾರ್ ಸುದ್ದಿ

ವಿಪ್ರ ಯುವಪರಿಷತ್‌ನ ರಕ್ತದಾನ ಶಿಬಿರ

2021-05-01 05:30:00, ajeyanews.com

Ajeya Imageಶಿವಮೊಗ್ಗ, ಮೇ 1:
ವಿಪ್ರ ಯುವ ಪರಿಷತ್ ವತಿಯಿಂದ ಇಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. 

ಕೋವಿಡ್ ಹಿನ್ನೆಲೆಯಲ್ಲಿ ಮೇ ತಿಂಗಳಿನಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನೇಷನ್ ಪ್ರಾರಂಭವಾಗಲಿದ್ದು, ವ್ಯಾಕ್ಸಿನ್ ಪಡೆದ ಯುವಕ ಯುವತಿಯರು ಕನಿಷ್ಟ 60 ದಿನಗಳ ಕಾಲ ರಕ್ತದಾನ ಮಾಡುವಂತಿಲ್ಲ. ಇದರಿಂದಾಗಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ದೇಶದಾದ್ಯಂತ ರಕ್ತದ ಕೊರತೆ ಉಂಟಾಗಲಿದ್ದು, ಇದನ್ನು ಮನಗೊಂಡ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ವ್ಯಾಕ್ಸಿನ್ ಹಾಕಿಸಿಕೊಳ್ಳುವ ಮುನ್ನಾ ಯುವ ಜನತೆ ರಕ್ತದಾನ ಮಾಡುವಂತೆ ಕರೆ ನೀಡಿದ ಹಿನ್ನೆಲೆಯಲ್ಲಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಪ್ರ ಸಮಾಜದ ಮುಖಂಡ ಎಸ್.ದತ್ತಾತ್ರಿ ತಿಳಿಸಿದರು.  

ವಿಪ್ರ ಯುವ ಪರಿಷತ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.


ಪದಗಂಟು :       
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©