Friday 14 May 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಭೀಮ್ ಸುದ್ದಿ

ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ: ಸಚಿವ ಕೆ.ಎಸ್.ಈಶ್ವರಪ್ಪ

ಮಹತ್ವದ ಸಭೆಗೆ ಗೈರುಹಾಜರಾಗಿರುವ ವೈದ್ಯರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡುವಂತೆ ಹಾಗೂ ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆಯಾದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸಿಮ್ಸ್ ಆಡಳಿತಾಧಿಕಾರಿಗಳಿಗೆ ತಿಳಿಸಿದರು.

2021-05-03 05:30:00, ajeyanews.com

Ajeya Imageಶಿವಮೊಗ್ಗ, ಮೇ 3:
ಜಿಲ್ಲೆಯಲ್ಲಿ ನಿಯಂತ್ರಣ ಮೀರಿ ಹರಡುತ್ತಿರುವ ಮಾರಣಾಂತಿಕ ಕೊರೋನ ಸೋಂಕನ್ನು ನಿಯಂತ್ರಿಸುವಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಆರೋಗ್ಯ ಇಲಾಖೆಯ ಸಮಸ್ತ ಸಿಬ್ಬಂದಿಗಳೊಂದಿಗೆ ಹಗಲಿರುಳು ಶ್ರಮಿಸುತ್ತಿರುವ ಈ ಸಂದರ್ಭದಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಆರೋಗ್ಯ ಇಲಾಖೆಯ ಸಿಬ್ಭಂದಿಗಳ ವರ್ತನೆ ಅಕ್ಷಮ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಅವರು ಇಂದು ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಸಿಮ್ಸ್ ಆಡಳಿತಾಧಿಕಾರಿಗಳು, ಕೊರೋನ ನಿಯಂತ್ರಣ ಕಾರ್ಯದಲ್ಲಿ ನಿರತವಾಗಿರುವ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದರು. 

ಮಹತ್ವದ ಸಭೆಗೆ ಗೈರುಹಾಜರಾಗಿರುವ ವೈದ್ಯರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡುವಂತೆ ಹಾಗೂ ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆಯಾದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸಿಮ್ಸ್ ಆಡಳಿತಾಧಿಕಾರಿಗಳಿಗೆ ತಿಳಿಸಿದರು.

ಶಿಫ್ಟ್ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುವ ಡಿ.ಗ್ರೂಪ್, ನರ್ಸ್ ಮತ್ತು ಇತರೆ ವಿಭಾಗಗಳ ಸಿಬ್ಬಂದಿಗಳ ಹಾಜರಾತಿಯನ್ನು ಸಂಬಂಧಿಸಿದ ಅಧಿಕಾರಿಗಳು ಗಮನಿಸಬೇಕು. ಸಕಾಲದಲ್ಲಿ ಕರ್ತವ್ಯಕ್ಕೆ ಹಾಜರಾಗದ ಸಿಬ್ಬಂದಿಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಕಾರ್ಯಕ್ಕಾಗಿ ಬಳಕೆಯಾಗುತ್ತಿರುವ ಸಿಬ್ಬಂದಿಗಳು, ಲಭ್ಯವಿರುವ ಲಸಿಕೆ, ಹಾಸಿಗೆಗಳು, ಕೋರೋನವಲ್ಲದೇ ಇತರೆ ಕಾಯಿಲೆಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸುವ ರೋಗಿಗಳ ಚಿಕಿತ್ಸೆಗೆ ಕೈಗೊಂಡಿರುವ ಕ್ರಮಗಳ ಕುರಿತು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.

ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಮಾತನಾಡಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಕೋವಿಡ್ ಸೋಂಕಿತರನ್ನು ನೋಡಲು ಆಗಮಿಸುವ ಸಂಬಂಧಿಕರು ರೋಗಿಯನ್ನು ನೋಡಲು ಹೋಗುವ ವ್ಯಕ್ತಿ ಪಿಪಿಇ ಕಿಟ್ ಧರಿಸುವುದು ಕಡ್ಡಾಯವಾಗಿದೆ. ದಿನಕ್ಕೆ 3-4 ಬಾರಿ ರೋಗಿಯನ್ನು ಸಂದರ್ಶಿಸುವ ವ್ಯಕ್ತಿ ಪ್ರತಿಬಾರಿಯೂ ಪಿಪಿಇ ಕಿಟ್ ಹೊಸದನ್ನು ಖರೀದಿಸಿ, ಧರಿಸುವುದು ಸಾಧ್ಯವೇ? ಈ ಪಿಪಿಇ ಕಿಟ್‌ಗಳು ಸುಲಭ ಬೆಲೆಯಲ್ಲಿ ದೊರೆಯುವುದಾದರೂ ಎಲ್ಲಿ? ಅಥವಾ ಒಮ್ಮೆ ಬಳಕೆಯಾದ ಕಿಟ್‌ಗಳೇ ಮತ್ತೆಮತ್ತೆ ಬಳಕೆಯಾಗುತ್ತಿವೆಯೇ? ಇದರಿಂದಾಗಿ ಸೋಂಕು ಇನ್ನಷ್ಟು ಹರಡುವ ಆತಂಕವಿದೆ. ಆದ್ದರಿಂದ ಸಾರ್ವಜನಿಕರಿಗೆ ಈ ಕಿಟ್‌ಗಳು ಸರಳವಾಗಿ, ಸುಲಭ ಬೆಲೆಯಲ್ಲಿ ದೊರೆಯುವಂತೆ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ವೈದ್ಯಕೀಯ ಸಂಸ್ಥೆಯ ಆಡಳಿತಾಧಿಕಾರಿಗಳು, ನಿರ್ದೇಶಕರು ಹಾಗೂ ವೈದ್ಯಾಧಿಕಾರಿಗಳು ಇಂದು ಸಂಜೆ ಸಭೆ ಸೇರಿ ತುರ್ತು ಮತ್ತು ಅಗತ್ಯ ನಿರ್ಣಯವನ್ನು ಕೈಗೊಂಡು ಮಾಹಿತಿ ನೀಡುವಂತೆ ಹಾಗೂ ಸರಳವಾಗಿ ಜನಸಾಮಾನ್ಯರಿಗೆ ಕಿಟ್‌ಗಳು ದೊರೆಯುವಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್, ರುದ್ರೇಗೌಡ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ರಾಜ್ಯ ಅಧ್ಯಕ್ಷ ಡಿ.ಎಸ್.ಅರುಣ್, ಸಿಮ್ಸ್ ಆಡಳಿತಾಧಿಕಾರಿ ಡಾ. ಎಸ್.ಓ.ಸಿದ್ಧಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ, ಜಿಲ್ಲಾ ಸರ್ಜನ್ ಡಾ. ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.

ದಿನಕ್ಕೆ 3-4 ಬಾರಿ ರೋಗಿಯನ್ನು ಸಂದರ್ಶಿಸುವ ವ್ಯಕ್ತಿ ಪ್ರತಿಬಾರಿಯೂ ಪಿಪಿಇ ಕಿಟ್ ಹೊಸದನ್ನು ಖರೀದಿಸಿ, ಧರಿಸುವುದು ಸಾಧ್ಯವೇ? ಈ ಪಿಪಿಇ ಕಿಟ್‌ಗಳು ಸುಲಭ ಬೆಲೆಯಲ್ಲಿ ದೊರೆಯುವುದಾದರೂ ಎಲ್ಲಿ? ಅಥವಾ ಒಮ್ಮೆ ಬಳಕೆಯಾದ ಕಿಟ್‌ಗಳೇ ಮತ್ತೆಮತ್ತೆ ಬಳಕೆಯಾಗುತ್ತಿವೆಯೇ? ಇದರಿಂದಾಗಿ ಸೋಂಕು ಇನ್ನಷ್ಟು ಹರಡುವ ಆತಂಕವಿದೆ.

- ಆಯನೂರು ಮಂಜುನಾಥ್, ಶಾಸಕ

ಪದಗಂಟು :        
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©