Sunday 13 June 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಪ್ರಧಾನಿ ಮೋದಿ - ಶಿವಮೊಗ್ಗ ಡಿಸಿ ಸಂವಾದ

ಅಧಿಕಾರಿಗಳು ಸಮನ್ವಯತೆ ಇಂದ ಕಾರ್ಯನಿರ್ವಹಿಸಿ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಾಗಿದೆ. ಸೂಕ್ತ ಚಿಕಿತ್ಸಾ ವಿಧಾನಗಳನ್ನು ಅಳವಡಿಸಿಕೊಂಡು ಸಂಪನ್ಮೂಲಗಳ ಸದ್ಬಳಕೆಗೆ ಪೂರಕ ವ್ಯವಸ್ಥೆ ಮಾಡಿಕೊಳ್ಳಿ.

2021-05-18 05:30:00, ajeyanews.com

Ajeya Imageಶಿವಮೊಗ್ಗ, ಮೇ 18:
ಕೊರೋನಾ ನಿಯಂತ್ರಣಾ ಸಂಬಂಧ ಇಂದು ರಾಜ್ಯದ 17 ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಸಂವಾದ ನಡೆಸಿದ್ದು, ಅದರಂತೆ ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಸಹ ಸಂವಾದ ನಡೆಯಿತು. 

ಅಧಿಕಾರಿಗಳು ಸಮನ್ವಯತೆ ಇಂದ ಕಾರ್ಯನಿರ್ವಹಿಸಿ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಾಗಿದೆ. ಸೂಕ್ತ ಚಿಕಿತ್ಸಾ ವಿಧಾನಗಳನ್ನು ಅಳವಡಿಸಿಕೊಂಡು ಸಂಪನ್ಮೂಲಗಳ ಸದ್ಬಳಕೆಗೆ ಪೂರಕ ವ್ಯವಸ್ಥೆ ಮಾಡಿಕೊಳ್ಳಿ. ಅಗತ್ಯಕ್ಕೆ ತಕ್ಕಂತೆ ಕೋವಿಡ್ ಕೇರ್ ಸೆಂಟರ್‌ಗಳನ್ನು ಆರಂಭಿಸುವ ಜೊತೆಗೆ ಆಸ್ಪತ್ರೆಗಳನ್ನು ಬಲಪಡಿಸಿ ಎಂದು ಸೂಚನೆ ನೀಡಿದರು. 

ಗ್ರಾಮೀಣ ಮಟ್ಟದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಅಧಿಕಾರಿಗಳು ತೀವ್ರ ನಿಗಾ ವಹಿಸಿ ಸೋಂಕು ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮಕೈಗೊಳ್ಳಿ. ಹೋಂ ಐಸೋಲೇಷನ್ ಇರುವವರ ಮೇಲೆ ತೀವ್ರ ನಿಗಾ ವಹಿಸುವುದರ ಜೊತೆಗೆ ಸರಿಯಾಗಿ ಔಷಧಿ, ವೈದ್ಯಕೀಯ ನೆರವು ಒದಗಿಸಿ ಕಾಲ ಕಾಲಕ್ಕೆ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುವ ಕಾರ್ಯ ನಡೆಸಿ ಜೊತೆಗೆ ಅಧಿಕಾರಿಗಳು ಮತ್ತು ಕೊರೋನಾ ವಾರಿಯರ್ಸ್‌ಗಳು ಕೂಡ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಸಲಹೆ ನೀಡಿದರು. 

ಸಂವಾದದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯ್ತಿ ಸಿಇಒ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಡಿಹೆಚ್‌ಒ ಡಾ.ರಾಜೇಶ್ ಸುರಗಿಹಳ್ಳಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. 

ಪದಗಂಟು :         
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©