Sunday 13 June 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಲಿಲಿಪುಟ್ ಸುದ್ದಿ

ಶಿಕ್ಷಣ ಇಲಾಖೆ ಅಧೀಕ್ಷಕ ಶ್ರೀನಾಥ್ ನಿಧನ

2021-05-21 05:30:00, ajeyanews.com

Ajeya Imageಶಿವಮೊಗ್ಗ, ಮೇ 21:
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಅಧೀಕ್ಷಕರಾಗಿದ್ದ ಹೆಚ್. ಶ್ರೀನಾಥ್ ಇಂದು ನಿಧನರಾಗಿದ್ದಾರೆ. 

ಅವರಿಗೆ 48 ವರ್ಷವಾಗಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. 

ಸಜ್ಜನರಾಗಿದ್ದ ಇವರು, ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಜನಪ್ರಿಯರಾಗಿ ಗುರುತಿಸಿಕೊಂಡಿದ್ದರು. ಇವರ ನಿಧನಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯ ನೌಕರರು ಹಾಗೂ ಮನೋಹರ್, ರಾಘವೇಂದ್ರ ಸೇರಿದಂತೆ ಹಲವರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. 

ಪದಗಂಟು :    
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©